Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಅತ್ಯಾಚಾರ ಆರೋಪಿ ಗುರ್ಮಿತ್ ಸಿಂಗ್ ಬಾಬಾ ರಾಮ್ ರಹೀಮ್‌ಗೆ ಬಿಜೆಪಿ ಬೆಂಬಲ ನೀಡುತ್ತಿದೆ ಎಂದು ಪ್ರಮುಖ ವಿಪಕ್ಷವಾದ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಪಂಚಕುಲದಲ್ಲಿ ಐಷಾರಾಮಿ ಆಶ್ರಮ ಹೊಂದಿರುವ ಬಾಬಾ ರಾಮ್ ರಹೀಮ್ ಅತ್ಯಾಚಾರ, ಹತ್ಯೆಯಂತಹ ಹೀನ ಕೃತ್ಯಗಳಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿದ್ದರೂ ಬಿಜೆಪಿ ಪರೋಕ್ಷವಾಗಿ ಬೆಂಬಲ ನೀಡುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ವಕ್ತಾರ ರಣದೀಪ್ ಸುರ್ಜೇವಾಲಾ ಕಿಡಿಕಾರಿದ್ದಾರೆ.
ಹರಿಯಾಣದಲ್ಲಿ ನಿನ್ನೆ ನಡೆದ ಹಿಂಸಾಚಾರದಲ್ಲಿ ಸುಮಾರು 30 ಕ್ಕಿಂತಲೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಮತ್ತು 250 ಮಂದಿ ಗಾಯಗೊಂಡಿದ್ದಾರೆ. ನೂರಾರು ಕೋಟಿ ರೂಪಾಯಿಗಳ ಆಸ್ತಿ ಪಾಸ್ತಿ ನಷ್ಟವಾಗಿದೆ. ಪರಿಸ್ಥಿತಿ ನಿರ್ವಹಣೆಯಲ್ಲಿ ವಿಫಲವಾದ ಸಿಎಂ ಖಟ್ಟರ್ ವಿರುದ್ಧ ಕ್ರಮಕೈಗೊಳ್ಳುವಲ್ಲಿ ಸರಕಾರ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅತ್ಯಾಚಾರಿ ಬಾಬಾಗೆ ಬೆಂಬಲ ನೀಡಿದ ಬಿಜೆಪಿಯ ನಿಜವಾದ ಮುಖವಾಡ ಬಹಿರಂಗವಾಗಿದೆ. ಹಿಂಸಾಚಾರ ಘಟನೆಗಳಿಗೆ ಬಿಜೆಪಿ ಬೆಂಬಲ ವ್ಯಕ್ತಪಡಿಸಿದಂತಾಗಿದೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಆರೋಪಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.