ಬಿಜೆಪಿ ಅಲೆ ಶುರುವಾಗಿದೆ : ನರೇಂದ್ರ ಮೋದಿ

Webdunia
ಶುಕ್ರವಾರ, 27 ಮೇ 2022 (09:13 IST)
ಹೈದರಾಬಾದ್ : ತೆಲಂಗಾಣ ರಾಜ್ಯದಲ್ಲಿ ಬಿಜೆಪಿ ಅಲೆ ಶುರುವಾಗಿದ್ದು, ಇಲ್ಲಿ ಬಿಜೆಪಿ ಮುಂದಿನ ಸರ್ಕಾರ ರಚಿಸಲಿದೆ ಎಂದು ಪ್ರಧಾನಿ ನರೇಂದ್ರಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
 
ಬೇಗಂಪೇಟೆ ವಿಮಾನ ನಿಲ್ದಾಣದಲ್ಲಿಂದು ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಟಿಆರ್ಎಸ್ (ತೆಲಂಗಾಣ ರಾಷ್ಟ್ರಸಮಿತಿ) ಒಂದು ಕುಟುಂಬದ ಪಕ್ಷವಾಗಿದ್ದು, ಅಧಿಕಾರದಲ್ಲಿರಲು ಯೋಗ್ಯವಲ್ಲ. ತೆಲಂಗಾಣದಲ್ಲಿ ಬಿಜೆಪಿ ಮುಂದಿನ ಸರ್ಕಾರ ರಚಿಸಲಿದೆ ಎಂದಿದ್ದಾರೆ.

ಕುಟುಂಬ ಆಡಳಿತದಿಂದಾಗಿ ದೇಶದ ಯುವಕರಿಗೆ ರಾಜಕೀಯದಲ್ಲಿ ಅವಕಾಶ ಸಿಗುತ್ತಿಲ್ಲ. ಈಗಾಗಲೇ ರಾಜ್ಯದಲ್ಲಿ ಬಿಜೆಪಿ ಪರ ಅಲೆ ಎದ್ದಿದ್ದು, ಮುಂದಿನ ವಿಧಾನಸಭೆ ಚುನಾವಣೆಯ ನಂತರ ಸರ್ಕಾರ ಬದಲಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. 

ಹಾಲಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಮತ್ತು ಅವರ ಕುಟುಂಬದ ವಿರುದ್ಧ ಮೋದಿ ಪರೋಕ್ಷ ವಾಗ್ದಾಳಿ ನಡೆಸಿದರು. ಅಲ್ಲದೆ, ತೆಲಂಗಾಣದಲ್ಲಿ ಕುಟುಂಬ ಆಡಳಿತವನ್ನು ಕೊನೆಗಾಣಿಸುವಂತೆ ಜನರಿಗೆ ಕರೆ ನೀಡಿದರು.

ಪ್ರತ್ಯೇಕ ತೆಲಂಗಾಣಕ್ಕಾಗಿ ಪ್ರಾಣ ತ್ಯಾಗ ಮಾಡಿದವರ ಆಶೋತ್ತರಗಳನ್ನು ಈಡೇರಿಸುವಲ್ಲಿ ಕುಟುಂಬ ಆಡಳಿತ ವಿಫಲವಾಗಿದೆ. ಆದ್ದರಿಂದ ತೆಲಂಗಾಣಕ್ಕೆ ಪ್ರಗತಿಪರ ಸರ್ಕಾರ ಬೇಕಿದ್ದು, ಬಿಜೆಪಿಯಿಂದ ಮಾತ್ರ ಅದು ಸಾಧ್ಯ ಎಂದು ಮೋದಿ ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಈಶ್ವರ್ ಖಂಡ್ರೆ ಆತ್ಮಕ್ಕೆ ಚಿರಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಮುಂದೇನಾಯ್ತು ನೋಡಿ

ಆರ್‌ಎಸ್‌ಎಸ್‌ ದೆವ್ವವಿದ್ದಂತೆ ಎಂದ ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ ಶಿವರಾಜ ತಂಗಡಗಿ

ಮುಸ್ಲಿಂರನ್ನು ಗುರಿಯಾಗಿಸಿ ಗುಂಡು ಹಾರಿಸುತ್ತಿರುವ ಘಟನೆ, ಅಸ್ಸಾಂ ಸಿಎಂ ವಿರುದ್ಧ ಮಹತ್ವದ ತೀರ್ಪು

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಮುಂದಿನ ಸುದ್ದಿ
Show comments