ಬ್ಲಾಕ್ಮೇಲ್ : ವಿದ್ಯಾರ್ಥಿಯನ್ನು ಕೊಂದ 10ನೇ ತರಗತಿ ವಿದ್ಯಾರ್ಥಿನಿಯರು!

Webdunia
ಬುಧವಾರ, 22 ಡಿಸೆಂಬರ್ 2021 (06:34 IST)
ಚೆನ್ನೈ : ಖಾಸಗಿ ಫೋಟೋಗಳನ್ನು ತೋರಿಸಿ ತಮ್ಮನ್ನು ಬ್ಲಾಕ್ಮೇಲ್ ಮಾಡುತ್ತಿದ್ದ ವಿದ್ಯಾರ್ಥಿಯನ್ನು ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತಿರುವಳ್ಳೂರ್ ಜಿಲ್ಲೆಯ ಈಚಿಂಗಾಡು ಗ್ರಾಮದಲ್ಲಿ ವ್ಯಕ್ತಿಯೊಬ್ಬನ ರಕ್ತಸಿಕ್ತ ಹಲ್ಲು ಮತ್ತು ಕೂದಲು ಇರುವ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಸಂಬಂಧ ಪೊಲೀಸರು ತನಿಖೆ ನಡೆಸಿದಾಗ, ಒಂದು ಜಾಗದಲ್ಲಿ ಶವ ಹೂತಿಟ್ಟಿರುವುದು ಪತ್ತೆಯಾಗಿದೆ. ಜೊತೆಗೆ ಕೊಲೆಯಾದವನ ಮೊಬೈಲ್ ಕೂಡ ಪೊಲೀಸರಿಗೆ ಸಿಕ್ಕಿದೆ.

 
ಆತ ಪರಸ್ಪರ ಬಾಲಕಿಯರಿಗೆ ತಿಳಿಯದಂತೆ ಇಬ್ಬರೊಂದಿಗೂ ಸಂಬಂಧ ಹೊಂದಿದ್ದ. ಬಾಲಕಿಯರ ಜೊತೆ ಆಕ್ಷೇಪಾರ್ಹ ಫೋಟೋಗಳನ್ನು ತೆಗೆದುಕೊಂಡು, ಅವರನ್ನು ಬ್ಲಾಕ್ಮೇಲ್ ಮಾಡಿ ಹಣಕ್ಕಾಗಿ ಪೀಡಿಸುತ್ತಿದ್ದ. ಹಣ ಕೊಡದಿದ್ದರೆ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್ ಮಾಡುವುದಾಗಿ ಹೆದರಿಸುತ್ತಿದ್ದ. ಇಬ್ಬರಿಂದಲೂ 50 ಸಾವಿರ ರೂ. ಸುಲಿಗೆ ಮಾಡಿದ್ದ ಎಂಬ ಮಾಹಿತಿ ವಿಚಾರಣೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆತ ಬೇಡಿಕೆಯಿಟ್ಟಿದ್ದ ಹಣವನ್ನು ಒದಗಿಸಲು ವಿದ್ಯಾರ್ಥಿನಿಯರಿಗೆ ಸಾಧ್ಯವಾಗಿಲ್ಲ. ಹೀಗಾಗಿ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ಮತ್ತೊಬ್ಬ ಯುವಕ ಅಶೋಕ್ನೊಂದಿಗೆ ತಮ್ಮ ಸಮಸ್ಯೆ ಹೇಳಿಕೊಂಡಿದ್ದಾರೆ. ಅಶೋಕ್ ನೀಡಿದ ಸಲಹೆ ಮೇರೆಗೆ ಪ್ರೇಮ್ಕುಮಾರ್ಗೆ ಕರೆ ಮಾಡಿ ಶೋಲವರಮ್ ಟೋಲ್ ಪ್ಲಾಜಾ ಬಳಿಗೆ ಬಾಲಕಿಯರು ಕರೆಸಿಕೊಂಡಿದ್ದಾರೆ. 

ಪ್ರೇಮ್ಕುಮಾರ್ನನ್ನು ಅಪಹರಿಸಿ ಮೊಬೈಲ್ನಲ್ಲಿರುವ ಫೋಟೋಗಳನ್ನು ಡಿಲೀಟ್ ಮಾಡುವಂತೆ ಬಾಲಕಿಯರು ಕೇಳಿದ್ದಾರೆ. ನಂತರ ಅಶೋಕ್ ಮತ್ತು ಆತನ ಸ್ನೇಹಿತರೊಂದಿಗೆ ಪ್ರೇಮ್ಕುಮಾರ್ನನ್ನು ಈಚಂಗಾಡು ಗ್ರಾಮಕ್ಕೆ ಕರೆದೊಯ್ದು ಕೊಲೆ ಮಾಡಿ, ಹೂತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಗಂಡನನ್ನು ಕೊಂದು ಟಾಯ್ಲೆಟ್ ನಲ್ಲಿ ಹೂತಿಟ್ಟು ಆಸ್ಕರ್ ಲೆವೆಲ್ ಗೆ ಆಕ್ಟಿಂಗ್: ಉತ್ತರ ಪ್ರದೇಶದ ರೂಬಿ ಕಿಲ್ಲಿಂಗ್ ಕಹಾನಿ ಇಲ್ಲಿದೆ

ಕೋಟಿ ರೂ ಖರ್ಚು ಮಾಡಿ ರಸ್ತೆ ಮಾಡಿದ್ದು ದನ ಸಾಕೋದಿಕ್ಕಾ... ಶಾಸಕ ರವಿ ಸುಬ್ರಹ್ಮಣ್ಯ ರೋಷಾವೇಷ Video

ಮತಪಟ್ಟಿ ಪರಿಷ್ಕರಣೆಯ ಮತ್ತೊಂದು ಕರ್ಮಕಾಂಡ ಬಯಲು: ಸಾರಾ ಮಹೇಶ್ ಗಂಭೀರ ಆರೋಪ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಕ್ರಮವಾಗಿ ಮತಪಟ್ಟಿ ಪರಿಷ್ಕರಣೆ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲು ಮುಂದಾದ ಬಿಜೆಪಿ

ಮುಂದಿನ ಸುದ್ದಿ
Show comments