Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಬಿಎಂಸಿ ಚುನಾವಣೆ: ಮುಂಬೈನಲ್ಲಿ ಶಿವಸೇನೆಯ ಘರ್ಜನೆ

ಬಿಎಂಸಿ ಚುನಾವಣೆ: ಮುಂಬೈನಲ್ಲಿ ಶಿವಸೇನೆಯ ಘರ್ಜನೆ
ಮುಂಬೈ , ಗುರುವಾರ, 23 ಫೆಬ್ರವರಿ 2017 (14:56 IST)
ಬೃಹತ್ ಮುಂಬೈ ಮಹಾನಗರಪಾಲಿಕೆ (ಬಿಎಂಸಿ) ಚುನಾವಣೆಯಲ್ಲಿ ಉದ್ಭವ್ ಠಾಕ್ರೆ ನೇತೃತ್ವದ ಶಿವಸೇನೆ 95 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಘರ್ಜಿಸಿ ಅಧಿಕಾರದ ಗದ್ದುಗೆಯತ್ತ ಸಾಗಿದೆ. ಆದರೆ, ರಾಜ್ಯದಲ್ಲಿ ಅಧಿಕಾರರೂಢವಾಗಿರುವ ಬಿಜೆಪಿ 2ನೇ ಸ್ಥಾನಕ್ಕೆ ತೃಪ್ತಿ ಪಡಬೇಕಾಗಿದೆ. 
 
ಕಾಂಗ್ರೆಸ್ ಪಕ್ಷ 29 ಸ್ಥಾನಗಳಲ್ಲಿ ಜಯಗಳಿಸಿದ್ದು ಮತದಾನ ಏಣಿಕೆ ಮುಂದುವರಿದಿದೆ. ಕಾಂಗ್ರೆಸ್ ಪಕ್ಷದ ಹೀನಾಯ ಪ್ರದರ್ಶನದಿಂದಾಗಿ ಪಕ್ಷದ ರಾಜ್ಯಾಧ್ಯಕ್ಷ ಸಂಜಯ್ ನಿರುಪಮ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. 
 
ಬೃಹತ್ ಮುಂಬೈ ಮಹಾನಗರಪಾಲಿಕೆ (ಬಿಎಂಸಿ) ಚುನಾವಣೆಯಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಶಿವಸೇನೆ ಮುಖಂಡ ಉದ್ಭವ್ ಠಾಕ್ರೆ ಪ್ರತಿಷ್ಠೆಯ ಹಣಾಹಣಿಯಾಗಿದೆ.
 
ಈ ಚುನಾವಣೆಯಲ್ಲಿ ಮಿತ್ರಪಕ್ಷಗಳಾದ ಶಿವಸೇನಾ, ಬಿಜೆಪಿ ಎದುರಾಳಿಗಳಾಗಿ ಸ್ಪರ್ಧಿಸಿದ್ದವು. ಹಲವಾರು ವಿಷಯಗಳಲ್ಲಿ ಭಿನ್ನಾಭಿಪ್ರಾಯಗಳಿಂದ ಕಚ್ಚಾಡುತ್ತಿರುವ ಬಿಜೆಪಿ-ಶಿವಸೇನಾ ಈ ಎಲೆಕ್ಷನ್ ಬಳಿಕ ಬ್ರೇಕಪ್‌ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮುಂಬೈ ಸೇರಿದಂತೆ 10 ಪಾಲಿಕೆ, 25 ಜಿಲ್ಲಾ ಪರಿಷತ್‌ಗಳಿಗೆ ಚುನಾವಣೆ ನಡೆದಿದ್ದು ಮತ ಎಣಿಕೆ ಮುಂದುವರಿದಿದೆ.
 
ಕಳೆದ 20 ವರ್ಷಗಳಿಂದ ಮೈತ್ರಿಕೂಟದಲ್ಲಿದ್ದ ಶಿವಸೇನೆ- ಬಿಜೆಪಿ ಮೊದಲ ಬಾರಿಗೆ ಪ್ರತ್ಯೇಕವಾಗಿ ಚುನಾವಣೆ ಎದುರಿಸುತ್ತಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಬ್ರಿಟನ್ ಕಾರ್ಯಕ್ರಮದಲ್ಲಿ ಪ್ರತ್ಯಕ್ಷವಾದ ವಿಜಯ್ ಮಲ್ಯ