Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಮೀರತ್ : ತನ್ನ ಗೆಳತಿಯನ್ನು ಭೇಟಿ ಮಾಡಲು ಆಕೆಯ ಮನೆಗೆ ಹೋದ 19 ವರ್ಷದ ಯುವಕನೊಬ್ಬನನ್ನು ಹೊಡೆದು ಕೊಂದ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ.
ಯುವಕ ತನ್ನ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ. ಯುವಕ , ಯುವತಿ ಜೊತೆ ಮಾತನಾಡುತ್ತಿರುವುದನ್ನು ನೋಡಿದ ಆಕೆಯ ಮನೆಯವರು ಯುವಕನನ್ನು ತಮ್ಮ ಮನೆಗೆ ಕರೆಸಿಕೊಂಡರು. ಬಳಿಕ ಆತನನ್ನು ಕ್ರೂರವಾಗಿ ಥಳಿಸಿ ಕೊಂದು ದೇಹವನ್ನು ಚೀಲದಲ್ಲಿ ತುಂಬಿಸಿ ಕೊಳದಲ್ಲಿ ಎಸೆದಿದ್ದಾರೆ.
ಶವ ಪತ್ತೆಯಾದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.