ನವದೆಹಲಿ : ದೇಶದಲ್ಲಿ ಮತ್ತೆ ನೈಋತ್ಯ ಮುಂಗಾರು ಚುರುಕಾಗುತ್ತಿದ್ದು, ದೇಶದ ಹಲವು ರಾಜ್ಯಗಳಲ್ಲಿ ಮತ್ತೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಆಗಸ್ಟ್ ಮೊದಲ ವಾರದಲ್ಲಿ ಕ್ಷೀಣಿಸಿದ್ದ ಮುಂಗಾರು ಇದೀಗ ಮತ್ತೆ ಚುರುಕಾಗಲಿದೆ. ಗುರುವಾರದಿಂದ ಉತ್ತರ ಭಾರತದಲ್ಲಿ ಮುಂಗಾರು ಮತ್ತೆ ಚುರುಕುಗೊಳ್ಳಲಿದೆ. ಆಗಸ್ಟ್ 19ರಿಂದ 21ರವರೆಗೂ ಉತ್ತರ ಪ್ರದೇಶ ಹಾಗೂ ಉತ್ತರಾಖಂಡದ ಕೆಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಹಿಮಾಚಲ ಪ್ರದೇಶ, ಹರಿಯಾಣ, ಚಂಡೀಗಢ, ದೆಹಲಿ ಹಾಗೂ ಪಶ್ಚಿಮ ಉತ್ತರ ಪ್ರದೇಶದಲ್ಲಿ ಆಗಸ್ಟ್ 20ರಿಂದ ಮತ್ತೆ ಹೆಚ್ಚಿನ ಮಳೆ ಬೀಳಲಿದೆ ಎಂದು ತಿಳಿಸಿದೆ. ಆಗಸ್ಟ್ 20ರ ನಂತರ ಬಿಹಾರ,. ಮಹಾರಾಷ್ಟ್ರ, ಗುಜರಾತ್, ಜಾರ್ಖಂಡ್, ಪಶ್ಚಿಮ ಬಂಗಾಳ, ಮಧ್ಯಪ್ರದೇಶ ಹಾಗೂ ಒಡಿಶಾ ರಾಜ್ಯಗಳಲ್ಲಿ ಮಳೆ ಮುಂದುವರೆಯಬಹುದು.
ಅತ್ಯಂತ ಕಡಿಮೆ ಮಳೆಯಾಗಿದ್ದ ದೆಹಲಿಯಲ್ಲಿ ಮತ್ತೆ ಮಳೆ ಆರಂಭವಾಗಲಿದೆ ಎಂದು ಮುನ್ಸೂಚನೆ ನೀಡಿ ಅರೇಂಜ್ ಅಲರ್ಟ್ ಘೋಷಣೆ ಮಾಡಿದೆ.