Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಬಿಆರ್‌ಎಸ್ ನಾಯಕಿ ಕೆ.ಕವಿತಾ ಮತ್ತೇ 14 ದಿನ ಇಡಿ ಕಸ್ಟಡಿಗೆ: ಕೋರ್ಟ್‌ ಆದೇಶ

BRS Kavitha

Sampriya

ತೆಲಂಗಾಣ , ಮಂಗಳವಾರ, 26 ಮಾರ್ಚ್ 2024 (15:53 IST)
ತೆಲಂಗಾಣ: ದೆಹಲಿಯ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್‌ಎಸ್ ನಾಯಕಿ ಕೆ.ಕವಿತಾ ಅವರ ಇಡಿ ಬಂಧನವನ್ನು ಏಪ್ರಿಲ್ 9 ವಿಸ್ತರಿಸಿ ಕೋರ್ಟ್​ ಆದೇಶ ಹೊರಡಿಸಿದೆ.

ಜಾರಿ ನಿರ್ದೇಶನಾಲಯದ (ಇ.ಡಿ) ಕಸ್ಟಡಿ ಅವಧಿಯನ್ನು ಮಾರ್ಚ್ 26ರವರೆಗೆ ವಿಸ್ತರಿಸಿ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಜಾರಿ ನಿರ್ದೇಶನಾಲಯಕ್ಕೆ ಮಾರ್ಚ್‌ 23ರಂದು (ಶನಿವಾರ) ಅನುಮತಿ ನೀಡಿದ್ದರು.

ಮಾರ್ಚ್ 15ರಂದು ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರ ಪುತ್ರಿ, 46 ವರ್ಷದ ಕವಿತಾ ಅವರನ್ನು ಇ.ಡಿ ಅಧಿಕಾರಿಗಳು ಅವರ ನಿವಾಸದಲ್ಲಿ ಬಂಧಿಸಿದ್ದರು. ಬಳಿಕ ಮಾರ್ಚ್ 23ರವರೆಗೆ ಇ.ಡಿ ವಶಕ್ಕೆ ಒಪ್ಪಿಸಲಾಗಿತ್ತು.

ಇದೇ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಬಂಧನಕ್ಕೊಳಗಾಗಿದ್ದಾರೆ.  

ಜಾಮೀನಿಗೆ ನಿರಾಕರಣೆ:
ಕವಿತಾ ಪರ ವಕೀಲ ನಿತೇಶ್ ರಾಣಾ ಅವರು ಕವಿತಾ ಅವರ ಅಪ್ರಾಪ್ತ ಮಗನ ಪರೀಕ್ಷೆಯ ಆಧಾರದ ಮೇಲೆ ಮಧ್ಯಂತರ ಜಾಮೀನು ಕೋರಿದ್ದರು. ಆದರೆ ಜಾಮೀನು ನೀಡಬಾರದು ಎಂದು ಇಡಿ ಪರ ವಕೀಲರು ವಾದ ಮಂಡಿಸಿದ್ದರು. ಮಧ್ಯಂತರ ಜಾಮೀನು, ಜಾಮೀನು ಎರಡಕ್ಕೂ ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಕಠಿಣ ನಿಯಮಗಳಿವೆ ಎಂದು ಇಡಿ ಒತ್ತಿಹೇಳಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್‌ ಬೆಟ್ಟಿಂಗ್‌ನಲ್ಲಿ 1 ಕೋಟಿ ಸಾಲ: ಸಾಲಗಾರರ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ