ಅಕ್ರಮ ಡಿ ನೋಟಿಫಿಕೇಷನ್ ಪ್ರಕರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಲೋಕಾಯುಕ್ತ ನ್ಯಾಯಾಲಯದಲ್ಲಿ ನಡೆದಿದ್ದ ವಿಚಾರಣೆಯನ್ನು 2015ರಲ್ಲಿ ಹೈಕೋರ್ಟ್ ರದ್ದುಪಡಿಸಿತ್ತು. ಇದೇ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಈಗ ನೋಟಿಸ್ ಜಾರಿ ಮಾಡಿದೆ.
ಸಾತನೂರಿನ ಕಬ್ಬಾಳೆಗೌಡ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಕೆ. ಸಿಕ್ರಿ ನೇತೃತ್ವದ ಪೀಠವು, ನೋಟಿಸ್ ಜಾರಿ ಮಾಡಿದ್ದು, ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಲಾಭ ಮಾಡಿಕೊಡುವ ಉದ್ದೇಶದಿಂದ ಅಧಿಕಾರ ದುರುಪಯೋಗವಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಲು ನೋಟಿಸ್ ಜಾರಿ ಮಾಡಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.