Select Your Language

Notifications

webdunia
webdunia
webdunia
webdunia

ಇಂದಿನಿಂದ ಬಜೆಟ್ ಅಧಿವೇಶನ

ಬಜೆಟ್
ನವದೆಹಲಿ : ಮಂಗಳವಾರದಿಂದ ಬಜೆಟ್ ಅಧಿವೇಶನ ಪ್ರಾರಂಭವಾಗುತ್ತಿದ್ದು, ಫೆಬ್ರವರಿ 1ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸತತ ಐದನೇ ಬಾರಿ ಬಜೆಟ್ ಮಂಡಿಸಲಿದ್ದಾರೆ.

2024ರ ಲೋಕಸಭೆ ಚುನಾವಣೆಗೆ ಮುನ್ನ ಕೇಂದ್ರ ಸರ್ಕಾರ ಮಂಡಿಸಲಿರುವ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಇದಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸಂಸತ್ ಭವನದಲ್ಲಿಂದು ಸರ್ವಪಕ್ಷ ಸಭೆ ಕರೆದಿತ್ತು.

ಲೋಕಸಭೆ ಉಪ ನಾಯಕ ರಾಜನಾಥ್ ಸಿಂಗ್, ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ನಡೆದ ಸಭೆಗೆ, ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭದ ಕಾರಣ ಕಾಂಗ್ರೆಸ್ ನಾಯಕರು ಗೈರಾಗಿದ್ದರು.

ನಾಳೆಯಿಂದ ಫೆಬ್ರವರಿ 13 ರವರೆಗೆ ಮತ್ತು ಕೊನೆಯ ಹಂತ ಮಾರ್ಚ್ 13 ರಿಂದ ಏಪ್ರಿಲ್ 6ರವರೆಗೆ ಅಧಿವೇಶನ ನಡೆಯಲಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಕ್ಷಿಪಣಿ ದಾಳಿ ಮಾಡಿ ಕೊಲೆ ಬೆದರಿಕೆ : ಜಾನ್ಸನ್