Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಪೊಲೀಸ್ ಠಾಣೆ ಪಕ್ಕದಲ್ಲೇ ತಾಯಿ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ

ಪೊಲೀಸ್ ಠಾಣೆ ಪಕ್ಕದಲ್ಲೇ ತಾಯಿ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ
ಬುಲಂದ್‌ಶಹರ್ , ಸೋಮವಾರ, 1 ಆಗಸ್ಟ್ 2016 (08:05 IST)
ತಾಯಿ ಮತ್ತು ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಅವರ ಮೈಮೇಲಿದ್ದ ಆಭರಣ ದೋಚಿದ ಘಟನೆ ಉತ್ತರ ಪ್ರದೇಶದ ಬುಲಂದ್ ಶಹರ್‌ನಲ್ಲಿ ಶುಕ್ರವಾರ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ 15 ಮಂದಿ ಶಂಕಿತ ಆರೋಪಿಗಳನ್ನು ಬಂಧಿಸಲಾಗಿದ್ದು, ಇಬ್ಬರು ಆರೋಪಿಗಳ ಗುರುತು ಪತ್ತೆಯಾಗಿದೆ.

ಹೆದ್ದಾರಿಯಲ್ಲಿ ಬರುತ್ತಿದ್ದ ಕಾರೊಂದನ್ನು ತಡೆಗಟ್ಟಿದ ದುಷ್ಕರ್ಮಿಗಳು ಅದರಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸದಸ್ಯರ ಮೇಲೆ ಹಲ್ಲೆ ಮಾಡಿ ಬಂದೂಕು ತೋರಿಸಿ ತಾಯಿ ಮತ್ತು 13 ವರ್ಷದ ಮಗಳನ್ನು ಎಳೆದೊಯ್ದ ಅತ್ಯಾಚಾರ ನಡೆಸಿದ್ದಾರೆ. ಘಟನೆ ನಡೆದ ಸ್ಥಳದಿಂದ 100ಮೀಟರ್‌ಗಳ ಅಂತರದಲ್ಲೇ ಪೊಲೀಸ್ ಠಾಣೆ ಇದ್ದು, ಹಲ್ಲೆಗೊಳಗಾದವರ ಕಾರು 3 ಗಂಟೆಗಳ ಕಾಲ ಅಲ್ಲಿಯೇ  ನಿಂತಿದ್ದರೂ ಪೊಲೀಸರ ಗಮನಕ್ಕೆ ಬಂದಿಲ್ಲ.

ಘಟನೆಯ ಬಳಿಕ ಶುಕ್ರವಾರ ರಾತ್ರಿಯಿಡಿ ಭೀತಿಯಲ್ಲೆ ಕಳೆದ ಕುಟುಂಬ ಶನಿವಾರ ಪೊಲೀಸ್ ಠಾಣೆಗೆ ಹೋಗಿ ದೂರು ಸಲ್ಲಿಸಿದೆ.

ಹೆದ್ದಾರಿ ಅತ್ಯಾಚಾರ ಪ್ರಕರಣಕ್ಕೆ  ವಿರೋಧ ಪಕ್ಷಗಳು ಕಿಡಿಕಾರಿದ್ದು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಕಾನೂನು ಸುವ್ಯವಸ್ಥೆ ಕಾಪಾಡಲು ವಿಫಲರಾಗಿದ್ದಾರೆ ಎಂದು ಆರೋಪಿಸಿವೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸಾವಿಗೆ ಕಾರಣವಾದ ಫೇಸ್‌ಬುಕ್ ಸ್ನೇಹ