Publish Date: Thu, 10 Nov 2022 (09:42 IST)
Updated Date: Thu, 10 Nov 2022 (09:45 IST)
ಕೋಲ್ಕತ್ತಾ : ಇಬ್ಬರು ಮಹಿಳೆಯರನ್ನು ಸಲಿಂಗಕಾಮಿಗಳು ಎಂದು ಶಂಕಿಸಿ, ಮೂವರು ಪರುಷರ ಗುಂಪು ಅವರಿಬ್ಬರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ,
ಬಿಸಿ ಕಬ್ಬಿಣದ ರಾಡ್ನಿಂದ ಖಾಸಗಿ ಭಾಗವನ್ನು ಸುಟ್ಟಿರುವ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಪ್ರದೇಶದಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಆಘಾತಕಾರಿ ಘಟನೆ ಅಕ್ಟೋಬರ್ 25ರಂದು ಜಿಲ್ಲೆಯ ಸಾಗರ್ದಿಘಿ ಗ್ರಾಮದಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತ ಮಹಿಳೆಯರನ್ನು ಪುರುಷರು ಲೈಂಗಿಕ ಪ್ರವೃತ್ತಿಗಾಗಿ ಥಳಿಸಿದ್ದಾರೆ ಎಂದು ತಿಳಿದುಬಂದಿದೆ.
ಇಬ್ಬರು ಮಹಿಳೆಯರು ಮಲಗಿದ್ದ ಸಂದರ್ಭ ಆರೋಪಿಗಳು ಕೊಠಡಿಯ ಬಾಗಿಲು ಒಡೆದು ಬಂದಿದ್ದಾರೆ. ಇಬ್ಬರು ಮಹಿಳೆಯರು ಒಂದೇ ಬೆಡ್ನಲ್ಲಿ ಮಲಗಿದ್ದಕ್ಕೆ ಅವರಿಬ್ಬರು ಸಲಿಂಗಕಾಮಿಗಳು ಎಂದು ಆರೋಪಿಸಿ ಅವರಿಬ್ಬರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ.