Publish Date: Sun, 18 Sep 2022 (14:38 IST)
Updated Date: Sun, 18 Sep 2022 (13:41 IST)
ಭೋಪಾಲ್ : ಪ್ರಧಾನಿ ಮೋದಿ ಭಾಷಣ ಕೇಳಲು ತೆರಳಿದ್ದ ಸ್ವಸಹಾಯ ಸಂಘದ ಮಹಿಳೆಯರಿದ್ದ ಬಸ್ ಕರೋನಿ ಕಣಿವೆ ಬಳಿ ಅಪಘಾತಕ್ಕೀಡಾಗಿದ್ದು, 20 ಮಹಿಳೆಯರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
20 ಮಹಿಳೆಯರು ಗಾಯಗೊಂಡಿದ್ದು, ಅವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಸ್ಥಳೀಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಮಧ್ಯಪ್ರದೇಶದ ಶಿಯೋಪುರದ ಕಾರ್ಹಾಲ್ನಲ್ಲಿ ನಡೆಯುತ್ತಿದ್ದ ಮಹಿಳಾ ಸ್ವಸಹಾಯ ಸಂಘದ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಷಣ ಕೇಳಲು 25 – 30 ಮಹಿಳೆಯರು ಬಸ್ನಲ್ಲಿ ತೆರಳಿದ್ದರು.
ಮಾರ್ಗಮಧ್ಯೆ ಟ್ರಾಫಿಕ್ ಸಮಸ್ಯೆ ಎದುರಾಗಿದ್ದರಿಂದ ಸಮಾವೇಶ ತಲುಪಲು ಸಾಧ್ಯವಾಗಲಿಲ್ಲ. ಹಿಂದಿರುಗಿ ಬರುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ.
Ramya kosira
Publish Date: Sun, 18 Sep 2022 (14:38 IST)
Updated Date: Sun, 18 Sep 2022 (13:41 IST)