ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸುಪ್ರೀಂಕೋರ್ಟ್ ಅತ್ಯುನ್ನತ ನ್ಯಾಯಪೀಠ. ನ್ಯಾಯಪೀಠ ನೀಡಿದ ಆದೇಶವನ್ನು ಕರ್ನಾಟಕ ಶಿರಸಾವಹಿಸಿ ತಮಿಳುನಾಡಿಗೆ ನೀರು ಬಿಡಬೇಕು ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರೆ ಎನ್.ಸಿ.ಶೈನಾ ಹೇಳಿದ್ದಾರೆ.
ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳು ದೇಶ ಅವಿಭಾಜ್ಯ ಅಂಗವಾಗಿದ್ದರಿಂದ ಕರ್ನಾಟಕ ಸ್ವಾರ್ಥವನ್ನು ತೊರೆದು ಗೌರವಯುತವಾಗಿ ತಮಿಳುನಾಡಿಗೆ ನೀರು ಬಿಡಬೇಕು ಎಂದು ಸಲಹೆ ನೀಡಿದ್ದಾರೆ.
ತಮಿಳುನಾಡಿನಲ್ಲಿ ಬಿಜೆಪಿ ಘಟಕ ನೀರು ಹರಿಸುವಂತೆ ಒತ್ತಾಯಿಸುತ್ತಿದ್ದರೆ, ಇತ್ತ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿದ್ದ ಸರ್ವಪಕ್ಷಗಳ ಸಭೆಯನ್ನು ಬಿಜೆಪಿ ಬಹಿಷ್ಕರಿಸಿದೆ. ಪ್ರಧಾನಿ ಮೋದಿ ಕೂಡಾ ಮಧ್ಯಸ್ಥಿಕೆ ವಹಿಸಲು ಸಾಧ್ಯವಿಲ್ಲ ಎನ್ನುತ್ತಿರುವುದು ಬಿಜೆಪಿ ಜಯಲಲಿತಾ ಒತ್ತಡಕ್ಕೆ ಮಣಿದಿದೆಯೇ ಎನ್ನುವ ಅನುಮಾನ ರಾಜ್ಯದ ಜನತೆಯನ್ನು ಕಾಡುತ್ತಿದೆ.
ಬಿಜೆಪಿ ನಾಯಕರ ವರ್ತನೆ ರಾಜ್ಯದ ಜನತೆಯಲ್ಲಿ ಆಕ್ರೋಶ ಮೂಡಿಸಿದೆ. ಶನಿವಾರದಂದು ನಡೆಯಲಿರುವ ತುರ್ತು ಅಧಿವೇಶನ ಸಭೆಯಲ್ಲಿ ಬಿಜೆಪಿ ನಾಯಕರು ಪಾಲ್ಗೊಳ್ಳದಿದ್ದರೆ ಕಾವೇರಿ ಕಣಿವೆಯಲ್ಲಿ ಓಡಾಡಲು ಬಿಡುವುದಿಲ್ಲ ಎಂದು ರೈತ ಸಂಘದ ಮುಖಂಡ ನಂಜುಂಡೇಗೌಡ ಎಚ್ಚರಿಕೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ