Webdunia - Bharat's app for daily news and videos

Install App

ಪೌರತ್ವ ತಿದ್ದುಪಡಿ ವಿಧೇಯಕಕ್ಕೆ ಇಂದು ರಾಜ್ಯಸಭೆಯಲ್ಲಿ ಪರೀಕ್ಷೆ

Webdunia
ಬುಧವಾರ, 11 ಡಿಸೆಂಬರ್ 2019 (09:32 IST)
ನವದೆಹಲಿ: ಕೇಂದ್ರ ಸರ್ಕಾರ ಮಂಡಿಸಿರುವ ವಿವಾದಾತ್ಮಕ ಪೌರತ್ವ ತಿದ್ದುಪಡಿ ವಿಧೇಯಕಕ್ಕೆ ಇಂದು ರಾಜ್ಯಸಭೆಯಲ್ಲಿ ಪರೀಕ್ಷೆ ಎದುರಾಗಲಿದೆ. ಇಂದು ಸಂಸತ್ತಿನ ಮೇಲ್ಮನೆಯಲ್ಲಿ ಈ ವಿಚಾರ ಮಂಡನೆಯಾಗಲಿದೆ.


ಪಾಕಿಸ್ತಾನ, ಅಫ್ಘಾನಿಸ್ತಾನ, ಮ್ಯಾನ್ಮಾರ್, ಬಾಂಗ್ಲಾದೇಶ ಸೇರಿದಂತೆ ಬೇರೆ ದೇಶದಿಂದ ಆಶ್ರಯ ಬಯಸಿ ಬರುವ ಮುಸ್ಲಿಮೇತರ ಧರ್ಮೀಯರಿಗೆ ಭಾರತೀಯ ಪೌರತ್ವ ನೀಡುವ ಈ ವಿಧೇಯಕಕ್ಕೆ ಕಾಂಗ್ರೆಸ್ ಸೇರಿದಂತೆ ಕೆಲವು ವಿಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ವಿರೋಧದ ನಡುವೆಯೂ ಲೋಕಸಭೆಯಲ್ಲಿ ಮಸೂದೆಗೆ ಅಂಗೀಕಾರ ಲಭಿಸಿದೆ.

ಆದರೆ ಇಂದು ಮಧ್ಯಾಹ್ನ 2 ಗಂಟೆ ಬಳಿಕ ರಾಜ್ಯಸಭೆಯಲ್ಲಿ ಈ ವಿಚಾರ ಪ್ರಸ್ತಾಪವಾಗಲಿದ್ದು, ಬಿಜೆಪಿ ಮತ್ತು ಇತರ ಪಕ್ಷಗಳ ನಡುವೆ ಬಿರುಸಿನ ವಾಗ್ವಾದಕ್ಕೆ ಕಾರಣವಾಗುವ ಸಾಧ‍್ಯತೆಯಿದೆ. ಇದು ಧಾರ್ಮಿಕವಾಗಿ ಒಡೆದು ಆಳುವ ನೀತಿ ಎನ್ನುವುದು ಕಾಂಗ್ರೆಸ್ ಮತ್ತು ಮಿತ್ರಪಕ್ಷಗಳ ಆರೋಪವಾಗಿದೆ. ಶಿವಸೇನೆ ಕೂಡಾ ಈ ವಿಚಾರದಲ್ಲಿ ಕೇಂದ್ರವನ್ನು ಬೆಂಬಲಿಸಲು ಹಿಂದೇಟು ಹಾಕಿದೆ. ಹೀಗಾಗಿ ಮೇಲ್ಮನೆಯಲ್ಲಿ ವಿದೇಯಕಕ್ಕೆ ಅಗ್ನಿಪರೀಕ್ಷೆ ಎದುರಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments