Webdunia - Bharat's app for daily news and videos

Install App

ಪಂಜಾಬ್-ಗೋವಾ ಪ್ರಚಾರಕ್ಕೆ ತೆರೆ

Webdunia
ಶುಕ್ರವಾರ, 3 ಫೆಬ್ರವರಿ 2017 (08:50 IST)
ಫೆಬ್ರವರಿ 4 ರಂದು ಚುನಾವಣೆಯನ್ನೆದುರಿಸುತ್ತಿರುವ ಪಂಜಾಬ್ ಮತ್ತು ಗೋವಾ ರಾಜ್ಯಗಳಲ್ಲಿ ಗುರುವಾರ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ.
ಎರಡು ರಾಜ್ಯಗಳಲ್ಲಿ ಒಂದೇ ಹಂತದ ಚುನಾವಣೆ ನಡೆಯುತ್ತಿದ್ದು ಪ್ರಧಾನಿ ಮೋದಿ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಆಪ್ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಸೇರಿದಂತೆ ದಿಗ್ಗಜರು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸಿದ್ದರು. 
ನಿನ್ನೆ ಸಹ ಪಂಜಾಬ್‌ನಲ್ಲಿ ಬೀಡುಬಿಟ್ಟಿದ್ದ ರಾಹುಲ್ ಗಾಂಧಿ ಮತದಾರರನ್ನು ಸೆಳೆಯಲು ಅಂತಿಮ ಪ್ರಯತ್ನ ನಡೆಸಿದ್ದರು. 
 
117 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಪಂಜಾಬ್‌ನಲ್ಲಿ ಕಾಂಗ್ರೆಸ್ ಕ್ಯಾ. ಅಮರಿಂದರ್ ಸಿಂಗ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದೆ. ಬಿಜೆಪಿ ತೊರೆದು ಆಪ್ ಸೇರಿರುವ ಸಿಕ್ಸರ್ ಸಿಧು ವರ್ಚಸ್ಸು, ಮತಗಳನ್ನು ಸಳೆಯಲು ಕೇಜ್ರಿವಾಲ್ ಬಣಕ್ಕೆ ಎಷ್ಟರ ಮಟ್ಟಿಗೆ ಸಫಲವಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
 
ಆಡಳಿತಾರೂಢ ಬಿಜೆಪಿ- ಅಕಾಲಿದಳ  ಮೈತ್ರಿಕೂಟ ಹಾಲಿ ಸಿಎಂ ಪ್ರಕಾಶ್ ಸಿಂಗ್ ಬಾದಲ್ ಅವರನ್ನೇ ಸಿಎಂ ಅಭ್ಯರ್ಥಿ ಎಂದು ಘೋಷಿಸಿ ಅದೃಷ್ಟ ಪರೀಕ್ಷಿಸ ಹೊರಟಿದೆ.
 
'ಕೈ' ಮುರಿದು, 'ಕಮಲ'ವನ್ನು ಕಿತ್ತೊಗೆದು, ದೆಹಲಿಯಂತೆ ಪಂಜಾಬ್‌ನಲ್ಲೂ ಗದ್ದುಗೆ ಏರಲು ಶತಾಯಗತಾಯ ಪ್ರಯತ್ನ ನಡೆಸುತ್ತಿರುವ ಆಪ್ ಭಗವಂತಮಾನ್ ಅವರನ್ನು ಸಿಎಂ ಅಭ್ಯರ್ಥಿ ಎಂದು ಘೋಷಿಸಿದೆ. 
 
ಪಂಜಾಬ್‌ನಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದೂ ದೇಶಾದ್ಯಂತ ಕುತೂಹಲಕ್ಕೆ ಕಾರಣವಾಗಿದೆ.
 
ಗೋವಾ ರಾಜ್ಯದ 40 ವಿಧಾನಸಭಾ ಕ್ಷೇತ್ರಗಳಿಗೆ 250 ಅಭ್ಯರ್ಥಿಗಳು ಕಣದಲ್ಲಿದ್ದು, ಅವರಲ್ಲಿ 57 ಮಂದಿ ಅಪರಾಧ ಹಿನ್ನೆಲೆಯುಳ್ಳವರಾಗಿದ್ದಾರೆ.ಕಾಂಗ್ರೆಸ್ 37 , ಎನ್ ಸಿಪಿ 16 ಮತ್ತು ಎಂಜಿಪಿ-ಜಿಎಸ್ಎಮ್-ಶಿವ ಸೇನಾ ಮೈತ್ರಿಕೂಟಗಳು 26 ಮಂದಿ, ಬಿಜೆಪಿ 36, ಆಮ್ ಆದ್ಮಿ ಪಕ್ಷ  39 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. 11 ಲಕ್ಷಕ್ಕೂ ಹೆಚ್ಚು ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದು, ರಾಜ್ಯಾದ್ಯಂತ 1,649 ಮತಗಟ್ಟೆಗಳಿವೆ.
 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments