ಕಾವೇರಿ ನೀರು ವಿವಾದದಿಂದಾಗಿ ರಾಜ್ಯ ಹೊತ್ತಿ ಉರಿಯುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿರುವ ತಮಿಳಿಯನ್ನರಿಗೆ ರಕ್ಷಣೆ ನೀಡಬೇಕೆಂದು ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ತಮಿಳಿಯನ್ನರಿಗೆ ಸೇರಿದ ಹೊಟೆಲ್ ಮತ್ತು ಆಸ್ತಿ ಪಾಸಿಗಳ ಮೇಲೆ ದಾಳಿ ನಡೆಯುತ್ತಿದೆ. ಇದು ಎಚ್ಚರಿಕೆಯ ಪರಿಸ್ಥಿಯಾಗಿದ್ದು ಆತಂಕವನ್ನು ಸೃಷ್ಟಿಸಿದೆ. ದಯವಿಟ್ಟು ಅವರಿಗೆ ಹೆಚ್ಚಿನ ಭದ್ರತೆಯನ್ನು ಒದಗಿಸಿ ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.
ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆ, ದೌರ್ಜನ್ಯ ನಡೆಯುತ್ತಿದೆ. ಅವರಿಗೆ ಸೂಕ್ತ ರಕ್ಷಣೆ ಒದಗಿಸಿ ಎಂದು ಸಿಎಂ ಸಿದ್ದರಾಮಯ್ಯ ಕೂಡ ಎರಡು ದಿನಗಳ ಹಿಂದೆ ಜಯಾಗೆ ಪತ್ರ ಬರೆದಿದ್ದರು.
ಕಾವೇರಿ ನೀರಿಗಾಗಿ ಕಳೆದೆರಡು ದಿನಗಳಿಂದ ಹೊತ್ತಿ ಉರಿಯುತ್ತಿದ್ದ ಬೆಂಗಳೂರು ಇಂದು ಸಹಜ ಸ್ಥಿತಿಗೆ ಮರಳುತ್ತಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ .