ಸಿಬಿಐ ದಾಳಿ ರಾಜಕೀಯ ಷಡ್ಯಂತ್ರವಾಗಿದೆ ಎಂದು ರಾಷ್ಟ್ರೀಯ ಜನತಾ ದಳ ಪಕ್ಷದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಆರೋಪಿಸಿದ್ದಾರೆ.
ನನ್ನ 12 ನಿವಾಸಗಳ ಮೇಲೆ ಇಂದು ಬೆಳಗಿನ ಜಾವ ಸಿಬಿಐ ದಾಳಿ ನಡೆಸಿರುವುದು ರಾಜಕೀಯ ಪ್ರೇರಿತವಾಗಿದೆ. ದಾಳಿಯ ಹಿಂದೆ ಕೇಂದ್ರ ಸರಕಾರದ ಕೈವಾಡವಿದೆ ಎಂದು ಗುಡುಗಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ಸಿಬಿಐ ನನ್ನ ಪುತ್ರಿಯ ವಿರುದ್ಧ ಪ್ರಕರಣ ದಾಖಲಿಸಿತ್ತು. ಇದೀಗ ನನ್ನ ಕುಟುಂಬದ ವಿರುದ್ಧ ಪ್ರಕರಣ ದಾಖಲಿಸಲು ಸಂಚು ನಡೆಸುತ್ತಿದೆ ಎಂದರು.
ಕಲೆದ 2006ರಲ್ಲಿ ಲಾಲು ಯಾದವ್ ರೈಲ್ವೆ ಸಚಿವರಾಗಿದ್ದಾಗ ಗುತ್ತಿಗೆ ಪ್ರಕರಣದಲ್ಲಿ ಕಂಪೆನಿಯೊಂದಕ್ಕೆ ಲಾಭ ಮಾಡಿಕೊಟ್ಟು ಕಂಪೆನಿಯಿಂದ ನಗರದ ಮಧ್ಯಭಾಗದಲ್ಲಿರುವ ಪ್ರದೇಶದಲ್ಲಿ ಎರಡು ಎಕರೆ ಭೂಮಿಯನ್ನು ಪಡೆದಿದ್ದರು ಎಂದು ಆರೋಪಿಸಲಾಗಿದೆ.
ಈಗಾಗಲೇ ಐಆರ್‌ಸಿಟಿಸಿ ಮಾಜಿ ವ್ಯವಸ್ಥಾಪಕ ನಿರ್ದೇಶಕನನ್ನು ವಶಕ್ಕೆ ತೆಗೆದುಕೊಂಡಿರುವ ಸಿಬಿಐ, ಲಾಲು ಮನೆಗಳನ್ನು ಜಾಲಾಡಿ ದಾಖಲೆಗಳನ್ನು ಸಂಗ್ರಹಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.