Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಭಾರತದಲ್ಲಿ ಒಮಿಕ್ರಾನ್ ರೂಪಾಂತರ ಕಾಣಿಸಿಕೊಂಡಾಗ ಕೇಂದ್ರವು ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆ ವಹಿಸುವಂತೆ ತಿಳಿಸಿತ್ತು.
ಇದರಂತೆ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ಪರಿಸ್ಥಿತಿಗೆ ಅನುಗುಣವಾಗಿ ಕೊರೊನಾ ನಿಯಮಾವಳಿಗಳನ್ನು ರೂಪಿಸಿದ್ದವು. ಇದೀಗ ದೇಶದಲ್ಲಿ ಪ್ರಕರಣಗಳು ಕಡಿಮೆಯಾಗುತ್ತಿರುವುದರಿಂದ ನಿಯಮಗಳನ್ನು ಸಡಿಲಿಸಿ,
ಮತ್ತೆ ಬದಲಾವಣೆ ಮಾಡುವಂತೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ರಾಜ್ಯಗಳಿಗೆ ಬುಧವಾರ ಪತ್ರ ಬರೆದಿದ್ದರು.