ನವದೆಹಲಿ : ಮಾರ್ಕಂಡೇಯ ಜಲಾಶಯ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕದ ನಡುವಿನ ವಿವಾದವನ್ನು ಬಗೆಹರಿಸಲು ಕೇಂದ್ರ ಸರ್ಕಾರ ಸಮಿತಿಯೊಂದನ್ನು ರಚನೆ ಮಾಡಿದೆ.
ಮಾರ್ಕಂಡೇಯ ಜಲಾಶಯ ನಿರ್ಮಾಣಕ್ಕೆ ಮುಂದಾದ ರಾಜ್ಯ ಸರ್ಕಾರದ ಕಾರ್ಯವನ್ನು ವಿರೋಧಿಸಿ ತಮಿಳುನಾಡು ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಆದರೆ ಕೋರ್ಟ್ ಕೇಂದ್ರ ಸರ್ಕಾರದ ಬಳಿ ಮನವಿ ಮಾಡುವಂತೆ ತಿಳಿಸಿತ್ತು. ಆದಕಾರಣ ತಮಿಳುನಾಡು ಕೇಂದ್ರ ಸರ್ಕಾರ ಬಳಿ ನ್ಯಾಯ ತೀರ್ಮಾನ ಮಾಡಲು ಮನವಿ ಮಾಡಿತ್ತು.
ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ನ್ಯಾಯಮಂಡಳಿಯ ಬದಲು ಸಮಾಲೋಚನಾ ಸಮಿತಿಯನ್ನು ರಚಿಸಿ ಆ ಮೂಲಕ ವಿವಾದ ಬಗೆಹರಿಸಲು ತೀರ್ಮಾನ ಮಾಡಿದೆ. ಫೆ.24ರಂದು ದೆಹಲಿಯಲ್ಲಿ ಈ ಕುರಿತು ಸಭೆ ನಡೆಯಲಿದ್ದು, ಅಂದು ಕರ್ನಾಟಕ ಮತ್ತು ತಮಿಳುನಾಡು ತಮ್ಮ ವಾದವನ್ನು ಮಂಡಿಸಲಿದ್ದಾರೆ.