ನವದೆಹಲಿ : ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ಕೋರಿ ಸಲಿಂಗಕಾಮಿ ದಂಪತಿ ಸುಪ್ರೀಂಕೋರ್ಟ್ಗೆ ಸಲ್ಲಿಸಿರುವ ಅರ್ಜಿಯನ್ನು ಕೇಂದ್ರ ಸರ್ಕಾರ ವಿರೋಧಿಸಿದೆ. ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ಅಫಿಡೆವಿಟ್ ಸಲ್ಲಿಸಿರುವ ಸರ್ಕಾರ ಇದನ್ನು ಭಾರತೀಯ ಕುಟುಂಬ ಘಟಕದ ಪರಿಕಲ್ಪನೆಗೆ ಹೋಲಿಸಲಾಗುವುದಿಲ್ಲ ಎಂದು ಹೇಳಿದೆ.
ಸಲಿಂಗ ಸಂಬಂಧಗಳು ಕಾನೂನುಬಾಹಿರವಲ್ಲದಿದ್ದರೂ, ಭಾರತೀಯ ವ್ಯವಸ್ಥೆಯಲ್ಲಿ ಪುರುಷ ಮತ್ತು ಮಹಿಳೆಯ ನಡುವೆ ಮದುವೆ ವ್ಯವಸ್ಥೆ ಹೊಂದಿದೆ.
ಸಲಿಂಗ ವ್ಯಕ್ತಿಗಳು ಪಾಲುದಾರರಾಗಿ ಒಟ್ಟಿಗೆ ವಾಸಿಸುವುದು ಮತ್ತು ಒಂದೇ ಲಿಂಗದ ವ್ಯಕ್ತಿಗಳು ಲೈಂಗಿಕ ಸಂಬಂಧ ಹೊಂದುವುದನ್ನು ಭಾರತೀಯ ಕುಟುಂಬ ಘಟಕದ ಪರಿಕಲ್ಪನೆ ವಿರುದ್ಧವಾಗಿದೆ ಎಂದು ಅಫಿಡೆವಿಟ್ನಲ್ಲಿ ಅಭಿಪ್ರಾಯಪಟ್ಟಿದೆ.
ಒಂದೇ ಲಿಂಗಕ್ಕೆ ಸೇರಿದ ವ್ಯಕ್ತಿಗಳ ನಡುವಿನ ಮದುವೆಯ ಗುರುತಿಸುವಿಕೆ ನೋಂದಣಿಗಿಂತ ದೂರವಿದೆ. ಮದುವೆ ತನ್ನದೆಯಾದ ಸಾರ್ವಜನಿಕ ಪ್ರಾಮುಖ್ಯತೆಯನ್ನು ಹೊಂದಿದೆ. ಇದು ವ್ಯವಸ್ಥೆಯನ್ನು ರಚಿಸುತ್ತವೆ. ಅಲ್ಲದೆ ಹಲವಾರು ಹಕ್ಕುಗಳು ಮತ್ತು ಹೊಣೆಗಾರಿಕೆಗಳನ್ನು ಹೊಂದುವ ಸಾಮಾಜಿಕ ವ್ಯವಸ್ಥೆಯಾಗಿದೆ. ಈ ಕಾರಣದಿಂದಲೇ ನೊಂದಣಿಗಿಂತ ಶಾಸ್ತ್ರೋಕ್ತವಾಗಿ ಮದುವೆ ಮಾಡಲಾಗುತ್ತದೆ.