ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯ ಅಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಪಡಿಸಿದ ಕೇಂದ್ರ ಸರ್ಕಾರದ ನಿರ್ಧಾರ ಸರಿಯಾಗಿದೆ ಎಂದು ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಅಷ್ಟೇ ಅಲ್ಲದೇ 2024ರ ಸೆಪ್ಟೆಂಬರ್ 30ರ ಒಳಗಡೆ ವಿಧಾನಸಭಾ ಚುನಾವಣೆ ನಡೆಸಬೇಕೆಂದು ಚುನಾವಣಾ ಆಯೋಗಕ್ಕೆ ಸೂಚಿಸಿದೆ.
ವಿಶೇಷ ಸ್ಥಾನವನ್ನು ರದ್ದು ಪಡಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ಮುಕ್ತಾಯಗೊಳಿಸಿದ್ದ ಮುಖ್ಯ ನ್ಯಾಯಮೂರ್ತಿ D.Y.ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿ.ಆರ್.ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ಐದು ನ್ಯಾಯಾಧೀಶರ ಸಂವಿಧಾನ ಪೀಠದಿಂದ ಸರ್ವಾನುಮತದ ತೀರ್ಪು ಪ್ರಕಟವಾಗಿದೆ.