ನವದೆಹಲಿ: ಸರ್ವೋಚ್ಛ ನ್ಯಾಯಾಲಯದ ನ್ಯಾಯಾಧೀಶರ ಒಳಜಗಳದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಕೇಂದ್ರ ಸರ್ಕಾರದ ಪರವಾಗಿ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ.
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಚರ್ಚೆ ನಡೆಸಿದ ನಂತರ ಅವರು ಈ ನಿರ್ಧಾರ ತಿಳಿಸಿದ್ದಾರೆ. ‘ಇದು ಸಂಪೂರ್ಣವಾಗಿ ಕೋರ್ಟ್ ನ ಆಂತರಿಕ ವಿಚಾರ. ಇದನ್ನು ಅವರೇ ಪರಿಹರಿಸಿಕೊಳ್ಳುತ್ತಾರೆ’ ಎಂದು ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಈ ನಡುವೆ ಕಾಂಗ್ರೆಸ್ ರಾಹುಲ್ ಗಾಂಧಿ ಕೂಡಾ ಪ್ರತಿಕ್ರಿಯಿಸಿದ್ದು, ಇದು ತೀವ್ರ ಕಳವಳಕಾರಿ ವಿದ್ಯಮಾನ ಎಂದಿದ್ದಾರೆ. ಈ ನಡುವೆ ರಾಹುಲ್ ಗಾಂಧಿ ತಮ್ಮ ಪಕ್ಷದ ಕಾನೂನು ತಜ್ಞರೊಂದಿಗೆ ಚರ್ಚೆ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ