ನವದೆಹಲಿ: ಟ್ವಿಟರ್ ಜೊತೆಗಿನ ಸಂಘರ್ಷದ ಬಳಿಕ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ ಭಾರತದಲ್ಲಿ ಸೋಷಿಯಲ್ ಮೀಡಿಯಾಗಳಿಗೆ ನಿರ್ಬಂಧ ವಿಧಿಸುವ ಹೊಸ ನಿಯಮವೊಂದನ್ನು ಜಾರಿಗೆ ತರಲು ಮುಂದಾಗಿದೆ.
ಸಂಸತ್ತಿನಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ರವಿಶಂಕರ್ ಪ್ರಸಾದ್, ಭಾರತದ ಕಾನೂನಿಗೆ ಬದ್ಧವಾಗಿರುವಂತೆ ಸೋಷಿಯಲ್ ಮೀಡಿಯಾಗಳಿಗೆ ನಿಯಮಾವಳಿ ರೂಪಿಸಲು ಹೊಸ ವಿಧೇಯಕ ತರಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಸುಳ್ಳು ಸುದ್ದಿ, ಹಿಂಸಾಚಾರಕ್ಕೆ ಪ್ರಚೋದನೆ ನೀಡಿದರೆ ಅಂತಹ ಸಾಮಾಜಿಕ ಜಾಲತಾಣವನ್ನು ನಿಷೇಧಿಸಲು ಸರ್ಕಾರ ಹಿಂದೆ ಮುಂದೆ ನೋಡುವುದಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.