Publish Date: Thu, 02 Sep 2021 (10:19 IST)
Updated Date: Thu, 02 Sep 2021 (10:20 IST)
ತಿರುವನಂತಪುರಂ: ಕೇರಳದಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಲಾಕ್ ಡೌನ್ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರ ಸಲಹೆ ನೀಡಿದೆ.
ದೇಶದ ಒಟ್ಟು ಕೊರೋನಾ ಪ್ರಕರಣಗಳ ಪೈಕಿ ಶೇ.70 ರಷ್ಟು ಪ್ರಕರಣಗಳು ಕೇರಳದಲ್ಲಿಯೇ ಕಂಡುಬಂದಿದೆ. ನಿನ್ನೆಯೂ ಒಂದೇ ದಿನ 30 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಕಂಡುಬಂದಿವೆ.
ಹೀಗಾಗಿ ಲಾಕ್ ಡೌನ್, ಲಸಿಕೆ ವಿತರಣೆ ಹೆಚ್ಚಿಸಲು ಕೇಂದ್ರ ಸರ್ಕಾರ ಸಲಹೆ ನೀಡಿದೆ. ಆದರೆ ಕೇರಳ ಸರ್ಕಾರ ಇನ್ನೂ ಈ ಬಗ್ಗೆ ತೀರ್ಮಾನ ಮಾಡಿಲ್ಲ.