Webdunia - Bharat's app for daily news and videos

Install App

Chattisgarh Assembly Election Results live: ಛತ್ತೀಸ್‌ಗಢ್ ವಿಧಾನಸಭೆ ಚುನಾವಣೆ ಫಲಿತಾಂಶ 2023 ಲೈವ್

Webdunia
ಭಾನುವಾರ, 3 ಡಿಸೆಂಬರ್ 2023 (00:06 IST)
ಛತ್ತೀಸ್ ಘಡದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿರುವ ಸಚಿವರುಗಳೇ ಭಾರೀ ಹಿನ್ನಡೆಯಲ್ಲಿ. ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಇದು ಭಾರೀ ಮುಖಭಂಗ.

ಛತ್ತೀಸ್ ಘಡದಲ್ಲಿ ಬಿಜೆಪಿ ಒಟ್ಟು 52 ಕ್ಷೇತ್ರಗಳಲ್ಲಿ ಮುನ್ನಡೆ ಹೊಂದಿದ್ದು 2 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದೆ. ಅತ್ತ ಕಾಂಗ್ರೆಸ್ 34 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದು 2 ಕ್ಷೇತ್ರಗಳಲ್ಲಿ ಗೆಲುವು ಕಂಡುಕೊಂಡಿದೆ. ಇತರರು ಇಲ್ಲಿ ಖಾತೆ ತೆರೆದಿಲ್ಲ.

ರಾಜನಂದಗಾಂವ್ ಕ್ಷೇತ್ರದಲ್ಲಿ ಬಿಜೆಪಿಯ ರಮಣ್ ಸಿಂಗ್ ಭಾರೀ ಮುನ್ನಡೆಯಲ್ಲಿದ್ದಾರೆ.

ಛತ್ತೀಸ್ ಘಡದಲ್ಲಿ ಮ್ಯಾಜಿಕ್ ನಂಬರ್ ದಾಟಿದ ಬಿಜೆಪಿ ಮುನ್ನಡೆ. 49 ರಲ್ಲಿ ಬಿಜೆಪಿ, 39 ರಲ್ಲಿ ಕಾಂಗ್ರೆಸ್ ಗೆ ಮುನ್ನಡೆ

ಛತ್ತೀಸ್ ಘಡದಲ್ಲಿ ಆಡಳಿತ ಉಳಿಸಿಕೊಳ್ಳಲು ಸಫಲರಾಗುವ ಹಂತದಲ್ಲಿ ಸಿಎಂ ಭೂಪೇಶ್ ಭಗೇಲ

ಛತ್ತೀಸ್ ಘಡದಲ್ಲಿ ಮತ್ತೆ ಕಾಂಗ್ರೆಸ್‍ ಫೈಟ್: ಕಾಂಗ್ರೆಸ್ 58, ಬಿಜೆಪಿ 32 ಬಿಜೆಪಿ. ಮತ್ತೆ ಹಿನ್ನಡೆ ಅನುಭವಿಸಿದ ಬಿಜೆಪಿ

ಛತ್ಥೀಸ್ ಘಡದಲ್ಲಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ
ಛತ್ತೀಸ್ ಘಡದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಒಟ್ಟು 49 ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆಯಲ್ಲಿದ್ದರೆ ಕಾಂಗ್ರೆಸ್ 39 ಸ್ಥಾನದಲ್ಲಿ ಮುನ್ನಡೆ ಹೊಂದಿದೆ. ಸುಮಾರು 10 ಸ್ಥಾನಗಳಿಂದ ಕಾಂಗ್ರೆಸ್ ಹಿನ್ನಡೆಯಲ್ಲಿದೆ.

ಛತ್ತೀಸ್ ಘಡದಲ್ಲಿ ಬಿಜೆಪಿ ಭಾರೀ ಮುನ್ನಡೆ
ಛತ್ತೀಘಡದಲ್ಲಿ ಈಗ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಸಮಬಲದ ಹೋರಾಟವಿತ್ತು. ಈ ಪೈಕಿ ಈಗ ಬಿಜೆಪಿ 50 ಸ್ಥಾನದಲ್ಲಿ ಮುನ್ನಡೆಯಲ್ಲಿದ್ದರೆ ಕಾಂಗ್ರೆಸ್ 38 ಸ್ಥಾನದಲ್ಲಿ ಮುನ್ನಡೆಯಲ್ಲಿದೆಯಷ್ಟೇ.

ಛತ್ತೀಸ್ ಘಡದಲ್ಲಿ ಬಿಜೆಪಿ-ಕಾಂಗ್ರೆಸ್ ಸಮಬಲ
ಛತ್ತಿಸ್ ಘಡದಲ್ಲಿ ಮತ್ತೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಭಾರೀ ಫೈಟ್ ಇದೆ. ಒಂದು ಕ್ಷಣ ಬಿಜೆಪಿ, ಒಂದು ಕ್ಷಣ ಕಾಂಗ್ರೆಸ್ ಕೆಲವೇ ಸೀಟುಗಳ ಅಂತದಲ್ಲಿ ಮುನ್ನಡೆ ಸಾಧಿಸುತ್ತಿದೆ. ಇದೀಗ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ 45 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದು ಸಮಬಲ ಸಾಧಿಸಿದೆ.

ಛತ್ತೀಸ್ ಘಡದಲ್ಲಿ ಮತ್ತೆ ಕಾಂಗ್ರೆಸ್ ಮುನ್ನಡೆ
ಛತ್ತೀಸ್ ಘಡದಲ್ಲಿ ಬಿಜೆಪಿ, ಕಾಂಗ್ರೆಸ್ ನಡುವೆ ನೆಕ್ ಟು ನೆಕ್ ಫೈಟ್ ಇದ್ದು, ಇದೀಗ ಮತ್ತೆ ಬಿಜೆಪಿ ಹಿಂದಿಕ್ಕಿ ಕಾಂಗ್ರೆಸ್ ಮುನ್ನಡೆ ಗಳಿಸಿದೆ. ಕಾಂಗ್ರೆಸ್ 46 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಬಿಜೆಪಿ 43 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ.

ಛತ್ತೀಸ್ ಘಡದಲ್ಲಿ ಮತ್ತೆ ಬಿಜೆಪಿ ಮುನ್ನಡೆ
ಛತ್ತೀಸ್ ಘಡದಲ್ಲಿ ಕಾಂಗ್ರೆಸ್ ಬಹುಮತದತ್ತ ಸಾಗುತ್ತಿತ್ತು. ಆದರೆ ಇದೀಗ ಬಿಜೆಪಿ ಮುನ್ನಡೆಯತ್ತ ಸಾಗುತ್ತಿದೆ ಇದೀಗ 45 ಕ್ಷೇತ್ರದಲ್ಲಿ ಬಿಜೆಪಿ, 43 ಕ್ಷೇತ್ರದಲ್ಲಿ ಕಾಂಗ್ರೆಸ್‍ ಮುನ್ನಡೆಯಲ್ಲಿದೆ.

ಛತ್ತೀಸ್ ಘಡದಲ್ಲಿ ‘ಕೈ’ ಮೇಲಾಗುವ ನಿರೀಕ್ಷೆ
ಛತ್ತೀಸ್ ಘಡ ವಿಧಾನಸಭೆ ಚುನಾವಣೆಯಲ್ಲಿ ಕೈ ಮೇಲಾಗುವ ನಿರೀಕ್ಷೆಯಿದೆ. ಕಾಂಗ್ರೆಸ್ ಇಲ್ಲಿ 56 ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ ತೀವ್ರ ಪೈಪೋಟಿ ನೀಡುತ್ತಿದ್ದರೂ 32 ಸ್ಥಾನದಲ್ಲಿ ಮುನ್ನಡೆ ಹೊಂದಿದೆಯಷ್ಟೇ. ಹೀಗಾಗಿ ಇಲ್ಲಿ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ಸಿಗುವ ನಿರೀಕ್ಷೆಯಿದೆ.

ಛತ್ತೀಸ್ ಘಡದಲ್ಲಿ ಕಾಂಗ್ರೆಸ್ ಮುನ್ನಡೆ
ಛತ್ತೀಸ್ ಘಡ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿಯಿದ್ದು, ಸದ್ಯದ ಮಾಹಿತಿ ಪ್ರಕಾರ ಕಾಂಗ್ರೆಸ್ ಮುನ್ನಡೆಯಲ್ಲಿದೆ. ಕಾಂಗ್ರೆಸ್ 44, ಬಿಜೆಪಿ 35 ಸ್ಥಾನದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಚತ್ತೀಸ್‌ಗಢ್ ವಿಧಾನಸಭೆ ಚುನಾವಣೆ ಫಲಿತಾಂಶ ಏಣಿಕೆ ಆರಂಭವಾಗಿದ್ದು, ಕಾಂಗ್ರೆಸ್44 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಬಿಜೆಪಿ ಪಕ್ಷ 28 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
 
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ಬಿಗ್ ಫೈಟ್ ನಡೆಯುತ್ತಿದ್ದು, ಎರಡೂ ಪಕ್ಷಗಳು ತೀವ್ರ ಪೈಪೋಟಿಯಲ್ಲಿವೆ. ಇನ್ನೂ ಮತಏಣಿಕೆ ಆರಂಭಿಕ ಹಂತದಲ್ಲಿರುವುದರಿಂದ ಚುನಾವಣೆಯಲ್ಲಿ ಯಾವ ಪಕ್ಷ ಅಧಿಕಾರದ ಗದ್ದುಗೆ ಹಿಡಿಯಲಿದೆ ಎನ್ನುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
 
ಚತ್ತೀಸ್‌ಗಢ್‌ದಲ್ಲಿ ಕಾಂಗ್ರೆಸ್  ಪಕ್ಷದ ಸರಕಾರ ಕಳೆದ ಐದು ವರ್ಷಗಳಿಂದ ಅಧಿಕಾರದಲ್ಲಿದ್ದು, ಕಾಂಗ್ರೆಸ್ ಪಕ್ಷ ಈ ಬಾರಿ ಮತ್ತೆ ತನ್ನ ಅದೃಷ್ಟ ಪರೀಕ್ಷೆಯನ್ನು ಪಣಕೊಡ್ಡಿದೆ. ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಭೂಪೇಶ್ ಬಘೇಲ್  ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
 
ಬಿಜೆಪಿ ಪಕ್ಷದ ಪರವಾಗಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಬಿರುಸಿನ ಚುನಾವಣೆ ಪ್ರಚಾರ ಕೈಗೊಂಡು ಅನೇಕ ರ್ಯಾಲಿಗಳಲ್ಲಿ ಪಾಲ್ಗೊಂಡು ಮತದಾರರ ಓಲೈಕೆ ಮಾಡಿದ್ದಾರೆ.  
 
ಮತದಾರರು ಯಾವ ಪಕ್ಷಕ್ಕೆ ಮಣೆ ಹಾಕಿದ್ದಾರೆ ಎನ್ನುವುದು ಇಂದಿನ ಮತಏಣಿಕೆಯಲ್ಲಿ ಬಹಿರಂಗವಾಗಲಿದೆ. ಹಲವಾರು ಚುನಾವಣೆ ಸಮೀಕ್ಷೆಗಳ ಸತ್ಯಾಸತ್ಯತೆಗೆ ಇಂದು ತೆರೆಬೀಳಲಿದೆ.ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ರಾಜ್ಯದಲ್ಲಿ ನಾಲ್ಕನೇ ಮೂರು ಬಹುಮತದೊಂದಿಗೆ ತಮ್ಮ ಪಕ್ಷವು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 
ಐದು ರಾಜ್ಯಗಳ ಚುನಾವಣೆ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ಕಿಸಿ
ಛತ್ತೀಸ್‌ಗಢ್ ವಿಧಾನಸಭೆ ಚುನಾವಣೆ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ಕಿಸಿ
ಛತ್ತೀಸ್‌ಗಢ್ ವಿಧಾನಸಭೆ ಚುನಾವಣೆ ಫಲಿತಾಂಶ ಗ್ರಾಫ್‌ಗಾಗಿ ಇಲ್ಲಿ ನೋಡಿ
ಛತ್ತೀಸ್‌ಗಢ್ ಪ್ರತಿಯೊಂದು ವಿಧಾನಸಭಾ ಕ್ಷೇತ್ರದ ಚುನಾವಣೆ ಫಲಿತಾಂಶಕ್ಕಾಗಿ ಇಲ್ಲಿ ವೀಕ್ಷಿಸಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments