ನವದೆಹಲಿ : ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನದಲ್ಲಿ ಕಿರುಕುಳಕ್ಕೊಳಗಾದ ಮುಸ್ಲಿಮೇತರ ಅಲ್ಪಸಂಖ್ಯಾತರಿಗೆ ಭಾರತೀಯ ಪೌರತ್ವವನ್ನು ನೀಡಲು,
ಅನುಕೂಲವಾಗುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು(ಸಿಎಎ) ಜಾರಿಗೆ ತರಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿ ಇಂದು ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ಭೇಟಿ ವೇಳೆ ಅಮಿತ್ ಶಾ ಸಿಎಎ ಜಾರಿಗೆ ತರುವ ಬಗ್ಗೆ ಭರವಸೆ ನೀಡಿದ್ದಾರೆ ಎಂದು ವರದಿಯಾಗಿದೆ.
ಸರ್ಕಾರ ಏಪ್ರಿಲ್ ತಿಂಗಳಿನಲ್ಲಿ ಜನರಿಗೆ ಬೂಸ್ಟರ್ ಡೋಸ್ ನೀಡಲು ಪ್ರಾರಂಭಿಸಿದೆ. ಇದು 9 ತಿಂಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಈ ಕಾರ್ಯ ಮುಗಿದ ಬಳಿಕ ಸಿಎಎ ಯೋಜನೆಯನ್ನು ಅನುಷ್ಠಾನಕ್ಕೆ ತರಲು ಕೇಂದ್ರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.