ನವದೆಹಲಿ: ಸರ್ಕಾರದ ಪ್ರತೀ ಯೋಜನೆಗಳನ್ನು ಪಡೆಯುವುದಕ್ಕೂ ಆಧಾರ್ ಕಡ್ಡಾಯಗೊಳಿಸಲು ಹೊರಟಿದ್ದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ತೀವ್ರ ಹಿನ್ನಡೆಯಾಗಿದೆ. ಖಾಸಗಿತನ ಮೂಲಭೂತ ಹಕ್ಕು ಎಂದು ಸುಪ್ರೀಂ ಕೋರ್ಟ್ ತೀರ್ಪಿತ್ತಿದೆ.
ಸರ್ಕಾರಿ ಯೋಜನೆಗಳಿಗೆ ಆಧಾರ್ ಕಡ್ಡಾಯಗೊಳಿಸುವ ಕೇಂದ್ರದ ನಿರ್ಧಾರದ ವಿರುದ್ಧ ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಜೆಎಸ್ ಖೆಹರ್ ನೇತೃತ್ವದ ನ್ಯಾಯಪೀಠ ಖಾಸಗಿತನ ಎನ್ನುವುದು ಪ್ರತೀ ನಾಗರಿಕನ ಮೂಲಭೂತ ಹಕ್ಕು ಎಂದು ತೀರ್ಪಿತ್ತಿದೆ.
ಎಲ್ಲಾ ಯೋಜನೆಗಳಿಗೆ ಆಧಾರ್ ಕಡ್ಡಾಯಗೊಳಿಸುವ ಮೂಲಕ ವ್ಯಕ್ತಿಯ ಬಯೋಮೆಟ್ರಿಕ್ ವಿವರಗಳನ್ನು ಬಹಿರಂಗಗೊಳಿಸುವುದು ಖಾಸಗಿತನಕ್ಕೆ ಧಕ್ಕೆ ತಂದಂತಾಗುತ್ತದೆ ಎಂದು ಅರ್ಜಿದಾರರು ವಾದಿಸಿದ್ದರು. ಇದನ್ನು ಸುಪ್ರೀಂ ಕೋರ್ಟ್ ಅಂಗೀಕರಿಸಿದ್ದು, ವ್ಯಕ್ತಿಯ ಖಾಸಗಿತನವನ್ನು ಬಹಿರಂಗಗೊಳಿಸುವ ಅಧಿಕಾರ ಯಾರಿಗೂ ಇಲ್ಲ ಎಂದಿದೆ.