ನವದೆಹಲಿ : ಭಾರತವು ಹಿಂದೂ ಬೆಳವಣಿಗೆ ದರದ ಅಪಾಯಕ್ಕೆ ಹತ್ತಿರದಲ್ಲಿದೆ ಎಂದು ಆರ್ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಹೇಳಿದ್ದು ಈಗ ಬಿಸಿ ಚರ್ಚೆಗೆ ಗ್ರಾಸವಾಗಿದೆ.
ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಭಾರತದ ಆರ್ಥಿಕತೆ ಹಿಂದೂ ಬೆಳವಣಿಗೆ ದರದ ಅಪಾಯದಲ್ಲಿದೆ. ಇದೊಂದು ಎಚ್ಚರಿಕೆಯ ಗಂಟೆಯಾಗಿದ್ದು ಕ್ರಮಕ್ಕೆ ಮುಂದಾಗಬೇಕು ಎಂದಿದ್ದಾರೆ.
2022ರ ಅಕ್ಟೋಬರ್-ಡಿಸೆಂಬರ್ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಶೇ.4.4 ಬೆಳವಣಿಗೆ ಸಾಧಿಸಿತ್ತು. ಈ ಮಂದಗತಿಯನ್ನು “ಹಿಂದೂ ಬೆಳವಣಿಗೆ ದರ” ಎಂಬ ಹಳೆಯ ಪರಿಕಲ್ಪನೆಯೊಂದಕ್ಕೆ ಹೋಲಿಸಿ ರಘುರಾಮ್ ರಾಜ್ ಅಭಿಪ್ರಾಯ ವ್ಯಕ್ತಪಡಿಸಿದರು.