ಉತ್ತರಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮತ್ತು ಸಹೋದರ ಶಿವಪಾಲ್ ಯಾದವ್ ಮಧ್ಯೆ ಭಿನ್ನಮತ ತಾರಕಕ್ಕೇರಿದೆ.
ಅಖಿಲೇಶ್ ಬೆಂಬಲಿಗರನ್ನು ಶಿವಪಾಲ್ ವಜಾಗೊಳಿಸಿದರೆ, ಶಿವಪಾಲ್ರನ್ನು ಸಚಿವ ಸ್ಥಾನದಿಂದ ಕಿತ್ತುಹಾಕಿ ಸೇಡು ತೀರಿಸಿಕೊಂಡಿದ್ದಾರೆ.
ಇಂದು ಮುಖ್ಯಮಂತ್ರಿ ಅಖಿಲೇಶ್ ಯಾದವ್, ಶಿವಪಾಲ್ ಯಾದವ್ ಮತ್ತು ಅವರ ನಾಲ್ವರು ಕಟ್ಟಾ ಬೆಂಬಲಿಗರನ್ನು ಸಚಿವ ಸಂಪುಟದಿಂದ ವಜಾಗೊಳಿಸಿದ್ದಾರೆ. ಇದರೊಂದಿಗೆ ಅಖಿಲೇಶ್ ಮತ್ತು ಶಿವಪಾಲ್ ಯಾದವ್ ಮಧ್ಯದ ಬಿಕ್ಕಟ್ಟು ಶಮನಗೊಳ್ಳುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ ಎನ್ನಲಾಗಿದೆ.
ಕೆಲ ದಿನಗಳ ಹಿಂದೆ ಶಿವಪಾಲ್ ಯಾದವ್, ಅಖಿಲೇಶ್ ಆಪ್ತರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಿ ಆದೇಶ ಹೊರಡಿಸಿದ್ದರು. ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭೆಗೆ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ಪಕ್ಷದಲ್ಲಿನ ಭಿನ್ನಮತ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಕಳವಳಕ್ಕೆ ಕಾರಣವಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ