ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ದೇವೇಂದ್ರ ಫಡ್ನವೀಸ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು ತಿಳಿದು ಬೇಸರವಾಯಿತು. ಹಾಗೇ ನೋಡಿದರೆ ಅವರ ಪದತ್ಯಾಗ ನನಗೆ ಖುಷಿ ಕೊಡಬೇಕಿತ್ತು. ಯಾಕೆಂದರೆ ನನ್ನ ಸರ್ಕಾರವನ್ನು ಕೆಡವಲು ಎಲ್ಲ ರೀತಿಯ ವ್ಯವಸ್ಥೆ ಮಾಡಿದ್ದು ಅವರೇ ಅಲ್ಲವೇ? ಅನರ್ಹರಿಗೆ ಆತಿಥ್ಯ ಕೊಟ್ಟವರೂ ಅವರೇ. ಈಗ ಅವರಿಗೆ ಕಾಲ ಉತ್ತರ ಕೊಟ್ಟಿದೆ ಎಂದು ಲೇವಡಿ ಮಾಡಿದ್ದಾರೆ.
ಅಲ್ಲದೇ ಮಾಡಿದ್ದುಣ್ಣೋ ಮಹರಾಯ ಎಂಬುದು ಲೋಕ ರೂಢಿ. ಮಾಡಿದ್ದರ ಪ್ರತಿಫಲ ದೇವೇಂದ್ರ ಫಡ್ನವೀಸ್ ಉಣ್ಣುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಸಿಎಂ ಯಡಿಯೂರಪ್ಪ ಕೂಡ ಉಣ್ಣುತ್ತಾರೆ. ಅಧಿಕಾರ ಹಪಹಪಿ, ಸರ್ಕಾರಗಳನ್ನು ಕೆಡವುದು , ಚುನಾವಣೆ ತರುವುದನ್ನು ಬಿಜೆಪಿ ಇನ್ನಾದರೂ ಬಿಡಲಿ ಎಂದು ಅವರು ಕಿಡಿಕಾರಿದ್ದಾರೆ.