ದೆಹಲಿಯ ಮುಂಡ್ಕದಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿ ದೇಹಲಿ ಸರಕಾರ ಆದೇಶಿಸಿದೆ.
ನಾಲ್ಕುಅಂತಸ್ತಿನ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ೨೭ ಮಂದಿ ಮೃತಪಟ್ಟು ೧೨ ಮಂದಿ ಗಾಯಗೊಂಡಿದ್ದರು. ಮೃತ ಕುಟುಂಬಗಳಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಹಾಗು ಗಾಯಾಳುಗಳಿಗೆ 50,000 ಸಾವಿರ ರೂಪಾಯಿಗಳ ಪರಿಹಾರವನ್ನ ಘೋಷಿಸಿದ್ದಾರೆ.
ಗಾಯಗೊಂಡಿರುವ 12 ಮಂದಿಯಲ್ಲಿ 11 ಜನರನ್ನು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಲ್ಲಿಯವರೆಗು ಸುಮಾರು 50ಕ್ಕು ಹೆಚ್ಚು ಜನರನ್ನು ರಕ್ಷಿಸಲಾಗಿದೆ ಕಾಣೆಯಾಗಿರುವ 29 ಜನರಿಗಾಗಿ ತೀವ್ರ ಶೋಧ ಕಾರ್ಯ ಮುಂದುವರೆದಿದೆ ಮುಂದಿನ 3-4 ಘಂಟೆಗಳಲ್ಲಿ ರಕ್ಷಣಾ ಕಾರ್ಯಾಚರಣೆ ಮುಗಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಕ್ರೇನ್ ಮೂಲಕ ಜನರನ್ನು ರಕ್ಷಿಸಿದ್ದಾರೆ. ಬೆಂಕಿ ಕಟ್ಟಡ ಪೂರ್ತಿ ಆವರಿಸಿದ ಕಾರಣ ಕೆಲವರು ಕಟ್ಟಡದಿಂದ ಜಿಗಿದ್ದರು ಇನ್ನು ಕೆಲವರು ಹಗ್ಗದ ಸಹಾಯದಿಂದ ಕೆಳಗಿಳಿದರು.
ಎರಡನೇ ಅಂತಸ್ತಿನಲ್ಲಿ ಸತ್ಸಂಗ ಕಾರ್ಯಕ್ರಮ ನಡೆಯುತಿತ್ತು. ಆದ ಕಾರಣ ಅತಿ ಹೆಚ್ಚು ಸಾವುಗಳು ಈ ಅಂತಸ್ತಿನಲ್ಲಿ ಸಂಭವಿಸಿರುವುದು ಎಂದು ತನಿಖೆ ಮೂಲಕ ತಿಳಿದು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಸಂಬಂಧ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ಮೋದಿ ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ 50,000 ರೂಪಾಯಿ ಪರಿಹಾರವನ್ನ ಘೋಷಿಸಿದ್ದಾರೆ.