ಸಿಎಂ ನಿತೀಶ್ ಕುಮಾರ್ ಮೇಲೆ ಹಲ್ಲೆ

Webdunia
ಸೋಮವಾರ, 28 ಮಾರ್ಚ್ 2022 (07:20 IST)
ಪಟ್ನಾ : ಸ್ವಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಮೇಲೆ ವ್ಯಕ್ತಿಯೋರ್ವ ಹಲ್ಲೆ ನಡೆಸಿದ ಘಟನೆ ನಡೆದಿದೆ.

ನಿತೀಶ್ ಕುಮಾರ್, ಸ್ವಗ್ರಾಮ ಭಕ್ತಿಯಾರ್ಪುರದಲ್ಲಿ ಸ್ಥಳೀಯ ಆಸ್ಪತ್ರೆಯ ಸಂಕೀರ್ಣದಲ್ಲಿದ್ದ ಬಿಹಾರ್ ಮೂಲದ ಸ್ವಾತಂತ್ರ್ಯ ಹೋರಾಟಗಾರ ಶಿಲಭದ್ರ ಯಾಜಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಮುಂದಾದಾಗ ವ್ಯಕ್ತಿಯೋರ್ವ ಮುಖ್ಯಮಂತ್ರಿಯ ಮೇಲೆ ಹಲ್ಲೆ ನಡೆಸಿದ್ದಾನೆ.

ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.  ನಿತೀಶ್ ಕುಮಾರ್ ಮಾಲಾರ್ಪಣೆ ಮಾಡಲು ಮುಂದಾಗುತ್ತಿದ್ದಂತೆ ಸಿಎಂಗೆ ವ್ಯಕ್ತಿಯೋರ್ವ ಹಿಂಬದಿಯಿಂದ ಬಂದು ಹೊಡೆದಿದ್ದಾನೆ.

ಕೂಡಲೇ ಭದ್ರತಾ ಸಿಬ್ಬಂದಿ ಆತನನ್ನು ಹಿಡಿದಿದ್ದಾರೆ. ಈ ಬಗ್ಗೆ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದಾಗ ಭದ್ರತಾ ಲೋಪ ಕಂಡುಬಂದಿದೆ.

ಸಿಸಿಟಿವಿ ದೃಶ್ಯಗಳನ್ನು ಗಮನಿಸಿದಾಗ ಹಿಂದಿನಿಂದ ಬಂದ ವ್ಯಕ್ತಿ, ನಿತೀಶ್ ಕುಮಾರ್ ಅವರ ಬೆನ್ನಿಗೆ ಹೊಡೆಯುವ ಮೊದಲು ವೇದಿಕೆಯ ಮೇಲೆ ನಡೆದುಕೊಂಡು ಹೋಗಿರುವುದು ಕಂಡುಬಂದಿದೆ.

ಸಿಎಂಗೆ ಹೊಡೆಯುತ್ತಿದ್ದಂತೆ ಕೂಡಲೇ ಅಲ್ಲಿದ್ದ ಭದ್ರತಾ ಸಿಬ್ಬಂದಿ ಆತನನ್ನು ಹಿಡಿದಿದ್ದಾರೆ. ಮೂಲಗಳ ಪ್ರಕಾರ ಹಲ್ಲೆ ಮಾಡಿದಾತನನ್ನು ಬಂಧಿಸಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿರುವ ಬಗ್ಗೆ ವರದಿಯಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಸೇವಿಸಿದ್ರಾ ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಯುಗಾದಿ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗುತ್ತಾ: ಕೋಡಿಶ್ರೀಗಳ ಶಾಕಿಂಗ್ ಭವಿಷ್ಯ

ರೀಲ್ಸ್ ಗಾಗಿ ಪುಟಾಣಿ ಮಗುವಿಗೆ ಸಿಗರೇಟ್, ಬಿಯರ್ ಕೊಟ್ಟ ಯುವಕ: Video

ಮುಂದಿನ ಸುದ್ದಿ
Show comments