ಶಿಂಧೆಗೆ ಇಂದು ವಿಶ್ವಾಸ ಪರೀಕ್ಷೆ

Webdunia
ಸೋಮವಾರ, 4 ಜುಲೈ 2022 (09:22 IST)
ಮುಂಬೈ : ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟನ್ನು ಸೃಷ್ಟಿಸಿದ್ದ ಬಂಡಾಯ ಶಾಸಕರ ನೇತೃತ್ವದ ನಾಯಕ ಏಕನಾಥ್ ಶಿಂಧೆ ಅವರು ಜೂ. 30ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
 
ಈ ಹಿನ್ನೆಲೆಯಲ್ಲಿ ಇಂದು ಬಹುಮತ ಸಾಬೀತು ಮಾಡಲಿದ್ದಾರೆ. ಎರಡು ದಿನಗಳ ಕಾಲ ಕರೆಯಲಾಗಿದ್ದ ವಿಶೇಷ ಅಧಿವೇಶನದಲ್ಲಿ, ಭಾನುವಾರದಂದು ಸ್ಪೀಕರ್ ಆಯ್ಕೆ ಮಾಡಲಾಗಿತ್ತು.

ಬಿಜೆಪಿ ಶಾಸಕ ರಾಹುಲ್ ನಾರ್ವೇಕರ್ ಬಂಡಾಯ ಶಾಸಕರ ನೆರವಿನೊಂದಿಗೆ 164 ಮತಗಳನ್ನು ಗಳಿಸುವ ಮೂಲಕ ಸ್ಪೀಕರ್ ಆಗಿ ಆಯ್ಕೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಇಂದು ಶಿಂಧೆ ಬಹುಮತ ಸಾಬೀತಿಗೆ ಮತಗಳ ಕೊರತೆಯಾಗದು ಎಂದು ಹೇಳಲಾಗುತ್ತಿದೆ.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಹುಮತಕ್ಕೆ 145 ಮತಗಳ ಅವಶ್ಯಕತೆ ಇದ್ದು, ಓರ್ವ ಶಾಸಕನ ನಿಧನದಿಂದ ಇದು 144ಕ್ಕೆ ಇಳಿದಿದೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ಶಿವಸೇನೆ 55, ಎನ್ಸಿಪಿ 53, ಕಾಂಗ್ರೆಸ್ 44, ಬಿಜೆಪಿ 106, ಬಹುಜನ ವಿಕಾಸ್ ಅಘಾಡಿ 3, ಸಮಾಜವಾದಿ 2, ಎಐಎಂಐಎಂ 2, ಪ್ರಹರ್ ಜನಶಕ್ತಿ 1, ಸಿಪಿಐ (ಎಂ) 1, ಪಿಡಬ್ಲ್ಯೂಪಿ 1, ಸ್ವಾಭಿಮಾನಿ ಪಕ್ಷ 1, ರಾಷ್ಟ್ರೀಯ ಸಮಾಜ ಪಕ್ಷ 1, ಜನಸುರಾಜ್ಯ ಶಕ್ತಿ ಪಕ್ಷ 1, ಕ್ರಾಂತಿಕಾರಿ ಶೆಟ್ಕರಿ ಪಕ್ಷ 1 ಸ್ಥಾನಗಳನ್ನು ಹೊಂದಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಗ್ಯಾರಂಟಿ ಪರಿಷ್ಕರಣೆ ಮಾಡ್ತಿರೋದು ಸರೀನಾ ಎಂದಿದ್ದಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ನಿಂಗೆ ನೋವಾದ್ರೆ ನಂಗೂ ನೋವಾಗುತ್ತೆ... ಪಾಲಕಿಗೆ ಗಾಯವಾಗಿದ್ದಕ್ಕೆ ಆನೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಫಿದಾ Viral

NEET ಪರೀಕ್ಷೆ 2026: ಸಿದ್ಧತೆ, ನಿಯಮಗಳು ಮತ್ತು ಪ್ರಮುಖ ವಿವರಗಳು ಇಲ್ಲಿದೆ

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಮನೆಗೇ ಬಂದು ಅಧಿಕಾರಿಗಳು ಕೇಳುವ ಈ 10 ಪ್ರಶ್ನೆಗಳಿಗೆ ಸಿದ್ಧರಾಗಿ

ಮುಂದಿನ ಸುದ್ದಿ
Show comments