Webdunia - Bharat's app for daily news and videos

Install App

ಜೆಎನ್‌ಯು ವಿದ್ಯಾರ್ಥಿಗಳು, ಸಿಬ್ಬಂದಿ ನಡುವೆ ಸಂಘರ್ಷ!

Webdunia
ಮಂಗಳವಾರ, 23 ಆಗಸ್ಟ್ 2022 (10:03 IST)
ನವದೆಹಲಿ : ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ(ಜೆಎನ್ಯು) ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ನಡುವೆ ವಿದ್ಯಾರ್ಥಿವೇತನ ವಿಚಾರವಾಗಿ ಘರ್ಷಣೆ ಉಂಟಾಗಿದೆ.

ಘಟನೆಯಲ್ಲಿ 6 ವಿದ್ಯಾರ್ಥಿಗಳು ಗಾಯಗೊಂಡಿರುವುದಾಗಿ ವರದಿಯಾಗಿದೆ. ಅಖಿಲ ಭಾರತ ವಿದ್ಯಾರ್ಥಿ ಪರಿಷತ್(ಎಬಿವಿಪಿ) ವಿದ್ಯಾರ್ಥಿಗಳ ಗುಂಪು ಇಂದು 2 ವರ್ಷಗಳಿಂದ ತಡೆಹಿಡಿಯಲಾದ ವಿದ್ಯಾರ್ಥಿವೇತನದ ಹಣವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದು, ಈ ವೇಳೆ ಸಂಸ್ಥೆಯ ಭದ್ರತಾ ಸಿಬ್ಬಂದಿ ತಮ್ಮ ಮೇಲೆ ದಾಳಿ ನಡೆಸಿರುವುದಾಗಿ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ವಿದ್ಯಾರ್ಥಿವೇತನದ ಬಗ್ಗೆ ವಿಚಾರಿಸಲು ಬೆಳಗ್ಗೆ 11 ಗಂಟೆಗೆ 5 ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ವಿಭಾಗಕ್ಕೆ ತೆರಳಿದ್ದರು. ಈ ವೇಳೆ ಸಂಸ್ಥೆಯ ಸಿಬ್ಬಂದಿ ವಿದ್ಯಾರ್ಥಿಗಳನ್ನು ನಿಂದಿಸಿ, ಅನುಚಿತವಾಗಿ ವರ್ತಿಸಿದರು.

ಈಗ ಸಂಸ್ಥೆಯ ಸ್ಥಿತಿ ಹೀಗಿದೆ, ಈ ಹಿಂದೆ 17 ಸಿಬ್ಬಂದಿ ಇದ್ದರು. ಈಗ 4 ಸಿಬ್ಬಂದಿ ಇದ್ದಾರೆ. ವಿದ್ಯಾರ್ಥಿಗಳು 2 ವರ್ಷಗಳಿಂದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಎಬಿವಿಪಿ ಜೆಎನ್ಯು ಅಧ್ಯಕ್ಷ ರೋಹಿತ್ ಕುಮಾರ್ ಹೇಳಿಕೆ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments