Webdunia - Bharat's app for daily news and videos

Install App

ಕಾಂಗ್ರೆಸ್, ರಾಹುಲ್ ಗಾಂಧಿ ಟ್ವಿಟ್ಟರ್ ಖಾತೆ ಹ್ಯಾಕ್ ಮಾಡಿದ ಹ್ಯಾಕರ್ಸ್

Webdunia
ಗುರುವಾರ, 1 ಡಿಸೆಂಬರ್ 2016 (12:30 IST)
ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ಟ್ವಿಟರ್ ಖಾತೆಯನ್ನು ಹ್ಯಾಕರ್ಸ್‌ಗಳು ಹ್ಯಾಕ್ ಮಾಡಿದ್ದಲ್ಲದೇ ಆಕ್ಷೇಪಾರ್ಹ ಸಂದೇಶಗಳನ್ನು ಪೋಸ್ಟ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. 
 
ಕಾಂಗ್ರೆಸ್ ಪಕ್ಷದ ಮತ್ತು ರಾಹುಲ್ ಗಾಂಧಿಯವರ ಟ್ವಿಟರ್ ಖಾತೆಗಳನ್ನು ನಿನ್ನೆ ರಾತ್ರಿ ಹ್ಯಾಕ್ ಮಾಡಲಾಗಿದ್ದು, ಸುಮಾರು ಒಂದು ಗಂಟೆಯವರೆಗೆ ಅಶ್ಲೀಲ ಸಂದೇಶಗಳನ್ನು ಪೋಸ್ಟ್ ಮಾಡಲಾಗಿತ್ತು ಎಂದು ಸೈಬರ್ ಅಪರಾಧ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.
 
ಕಾಂಗ್ರೆಸ್ ಪಕ್ಷದ ವಕ್ತಾರ ರಣದೀಪ್ ಸುರ್ಜೆವಾಲಾ ಈಗಾಗಲೇ ಸೈಬರ್ ಸೆಲ್‌ಗೆ ದೂರು ನೀಡಿದ್ದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. 
 
ಇಂತಹ ಹೇಡಿ ಕೃತ್ಯಗಳಿಂದ ಜನತೆಯ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ. ರಾಹುಲ್ ಗಾಂಧಿ ನಿರಂತರವಾಗಿ ಜನತೆಯ ಸಮಸ್ಯೆಗಳಿಗಾಗಿ ಹೋರಾಟ ಮುಂದುವರಿಸಲಿದ್ದಾರೆ ಎಂದು ರಣದೀಪ್ ಸಿಂಗ್ ಸುರ್ಜೇವಾಲಾ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments