ಪ್ರಧಾನಮಂತ್ರಿ ನರೇಂದ್ರ ಮೋದಿಯ ಭ್ರಷ್ಟಾಚಾರ ಮತ್ತು ನೋಟು ನಿಷೇಧ ಕುರಿತಂತೆ ಕಾಂಗ್ರೆಸ್ ಪಕ್ಷ ಜನೆವರಿ 6 ರಿಂದ ದೇಶಾದ್ಯಂತ ಪ್ರತಿಭಟನೆ ಆರಂಭಿಸುವುದಾಗಿ ಘೋಷಿಸಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯ ಭ್ರಷ್ಟಾಚಾರ ಮತ್ತು ನೋಟು ನಿಷೇಧ ಕುರಿತಂತೆ ಕಾಂಗ್ರೆಸ್ ಪಕ್ಷ ಮೂರು ಹಂತಗಳಲ್ಲಿ ಪ್ರತಿಭಟನೆ ನಡೆಸಲಿದ್ದು, ಅದರಂತೆ ಜನೆವರಿ 6 ರಂದು ಮೊದಲ ಹಂತದ ಪ್ರತಿಭಟನೆ ಆರಂಭಿಸಲಾಗುತ್ತಿದೆ ಎಂದು ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ತಿಳಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಕಾರ್ಪೋರೇಟ್ ಕಂಪೆನಿಗಳಿಂದ 65 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ನಾವು ಪ್ರಧಾನಿ ಮೋದಿಯವರಿಗೆ ನೀವು ಹಣ ಪಡೆದಿದ್ದೀರಾ ಅಥವಾ ಇಲ್ಲ ಎನ್ನುವ ಸರಳವಾದ ಪ್ರಶ್ನೆಯನ್ನು ಕೇಳುತ್ತಿದ್ದೇವೆ. ಒಂದು ವೇಳೆ ನೀವು ತೆಗೆದುಕೊಂಡಿಲ್ಲ ಎಂದಾದಲ್ಲಿ ಸ್ವತಂತ್ರ ತನಿಖೆಗೆ ಯಾಕೆ ಆದೇಶ ನೀಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
ಗುಜರಾತ್ ಮಾಜಿ ಮುಖ್ಯಮಂತ್ರಿ ಸುರೇಶ್ ಮೆಹತಾ, ಕಪ್ಪು ಹಣದ ಆರೋಪಿ ಮಹೇಶ್ ಶಾಹ್, ಅಂದು ಗುಜರಾತ್ ಮುಖ್ಯಮಂತ್ರಿಯಾಗಿದ್ದ ಮೋದಿಯನ್ನು ಯಾವುದೇ ನಿರ್ಭಂಧವಿಲ್ಲದೇ ಭೇಟಿ ಮಾಡುತ್ತಿದ್ದರು ಎಂದು ಹೇಳಿಕೆ ನೀಡಿರುವುದಾಗಿ ಕಾಂಗ್ರೆಸ್ ಪಕ್ಷದ ವಕ್ತಾರ ರಣದೀಪ್ ಸುರ್ಜೇವಾಲಾ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.