Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಮುಂಬರುವ ಚುನಾವಣೆ ನಂತ್ರ ಮೋದಿ ಸರ್ಕಾರ ಪತನ: ಸೋನಿಯಾ ಗಾಂಧಿ

ಮುಂಬರುವ ಚುನಾವಣೆ ನಂತ್ರ ಮೋದಿ ಸರ್ಕಾರ ಪತನ: ಸೋನಿಯಾ ಗಾಂಧಿ
ನವದೆಹಲಿ , ಮಂಗಳವಾರ, 22 ನವೆಂಬರ್ 2016 (14:24 IST)
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಸರಕಾರ ಪತನವಾಗಲಿದ್ದು, ಕಾಂಗ್ರೆಸ್ ನೇತೃತ್ವ ಯುಪಿಎ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ.
 
ಕಳೆದ ಲೋಕಸಭೆ ಚುನಾವಣೆಯಲ್ಲಿ ಅಲ್ಪ ಸ್ಥಾನಗಳಿಸಿದ್ದ ಕಾಂಗ್ರೆಸ್ ಮತ್ತೆ ಅಧಿಕಾರದ ಗದ್ದುಗೆ ಏರಲಿದೆ. ರಾಜಕೀಯದಲ್ಲಿ ಸೋಲು, ಗೆಲುವು ಅಧಿಕಾರಕ್ಕೇರುವುದು, ಅಧಿಕಾರದಿಂದ ಇಳಿಯುವುದು ಸರ್ವೆ ಸಾಮಾನ್ಯ ಎಂದು ತಿಳಿಸಿದ್ದಾರೆ.
 
ನೋಟ್ ಬ್ಯಾನ್‌ ಕುರಿತಂತೆ ಮೋದಿ ಸರಕಾರದ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್, ನೋಟ್‌ಬ್ಯಾನ್‌ನಿಂದ ಮೋದಿ ಇಮೇಜ್‌ಗೆ ಧಕ್ಕೆಯಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕರ ಹೇಳಿಕೆ ಹೊರಬಿದ್ದಿದೆ. 
 
2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕೇವಲ 44 ಲೋಕಸಭೆ ಕ್ಷೇತ್ರಗಳಲ್ಲಿ ಜಯಗಳಿಸಲು ಸಾಧ್ಯವಾಗಿತ್ತು. ಮಂಬರುವ ಚುನಾವಣೆಯಲ್ಲಿ ಪಕ್ಷವನ್ನು ಬಲಪಡಿಸಿ ಅಧಿಕಾರಕ್ಕೆ ತರುವುದು ನಮ್ಮ ಗುರಿಯಾಗಿದೆ ಎಂದು ಘೋಷಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿರಾ ಗಾಂಧಿಗೆ ರಾಜಕೀಯ ಇಷ್ಟವಿರಲಿಲ್ಲ: ಸೋನಿಯಾ ಗಾಂಧಿ