ಜೈಪುರ : ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡ ಹಿನ್ನಲೆಯಲ್ಲಿ ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಡಿಸಿಎಂ ಸಚಿನ್ ಪೈಲಟ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದೆ.
ನಿನ್ನೆ ಜೈಪುರದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಚಿನ್ ಪೈಲಟ್ ಅವರಿಗೆ ಭಾಗಿಯಾಗಲು ಸೂಚಿಸಲಾಗಿತ್ತು. ಆದರೆ ಅವರು ಸಭೆಯಲ್ಲಿ ಭಾಗಿಯಾಗದ ಹಿನ್ನಲೆಯಲ್ಲಿ ಸಚಿನ್ ಪೈಲಟ್ ಅವರನ್ನು ಡಿಸಿಎಂ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿದೆ. ಹಾಗೇ ಅವರ ಬೆಂಬಲಕ್ಕೆ ನಿಂತ ಸಚಿವರಾದ ವಿಶ್ವೇಂದ್ರ ಸಿಂಗ್ ಮತ್ತು ರಮೇಶ್ ಮೀನಾ ಅವರನ್ನೂ ಕೂಡ ಅವರ ಹುದ್ದೆಗಳಿಂದ ತೆಗೆದುಹಾಕಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿನ್ ಪೈಲಟ್, ಸತ್ಯವನ್ನು ಸಂಕಷ್ಟದಲ್ಲಿ ಸಿಲುಕಿಸಬಹುದೇ ವಿನಃ ಸೋಲಿಸಲು ಸಾಧ್ಯವಿಲ್ಲ ಎಂದು ಟ್ವೀಟ್ ಮೂಲಕ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.