ಗುಜರಾತ್ ಚುನಾವಣೆಯಲ್ಲಿ ಇವಿಎಂನಲ್ಲಿ ಲೋಪವಾಗಿದ್ದು, ವಿವಿಪ್ಯಾಟ್ ಎಣಿಕೆ ಮಾಡುವಂತೆ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದು, ಕಾಂಗ್ರೆಸ್‌ಗೆ ಮುಖಭಂಗವಾಗಿದೆ.
ಗುಜರಾತ್ ಚುನಾವಣೆಯಲ್ಲಿ ಶೇ. 20 ರಷ್ಟು ಮತಗಳನ್ನು ವಿವಿಪ್ಯಾಟ್‌ಗಳ ಜತೆ ತಾಳೆ ಮಾಡಲು ಚುನಾವಣಾ ಆಯೋಗಕ್ಕೆ ನಿರ್ದೇಶಿಸುವಂತೆ ಕಾಂಗ್ರೆಸ್ ಕೋರ್ಟ್ ಮೊರೆ ಹೋಗಿತ್ತು. ಆದರೆ, ಕೋರ್ಟ್ ಚುನಾವಣೆ ಆಯೋಗದ ವಿವೇಚನಾಧಿಕಾರದಲ್ಲಿ ತಾನು ಹಸ್ತಕ್ಷೇಪ ಮಾಡಲಾಗದು ಎಂದು ಹೇಳಿದೆ.
ಬೇಕಿದ್ದರೆ ಚುನಾವಣಾ ಸುಧಾರಣೆಗಾಗಿ ಪಕ್ಷವು ಸುಪ್ರೀಂಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಬಹುದು ಕೋರ್ಟ್ ತಿಳಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.