ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ತಮಗೆ ಬಂದಿದ್ದ ಆಹ್ವಾನವನ್ನು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ತಿರಸ್ಕರಿಸಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.
ಬಿಜೆಪಿ ಅಯೋಧ್ಯೆಯನ್ನು ತನ್ನ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದೆ. ಆ ಕಾರಣಕ್ಕೆ ನಾವು ಅಯೋಧ‍್ಯೆಗೆ ಬರಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು. ಆದರೆ ಇದನ್ನು ಬಿಜೆಪಿ ಟೀಕಾಸ್ತ್ರವಾಗಿ ಬಳಸಿಕೊಳ್ಳುತ್ತಿರುವುದು ಕಾಂಗ್ರೆಸ್ ಗೆ ಚಿಂತೆಯ ವಿಷಯವಾಗಿದೆ.
ಕಾಂಗ್ರೆಸ್ ಹಿಂದೂ ವಿರೋಧಿ ಎಂದು ಬಿಜೆಪಿ ಬಿಂಬಿಸುತ್ತಿದೆ. ಇದರಿಂದಾಗಿ ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಬಹುದು ಎಂದು ಭಯ ಕಾಂಗ್ರೆಸ್ ಗಿದೆ. ಹೀಗಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಮಮಂದಿರ ಉದ್ಘಾಟನೆಗೆ ಹೋಗಲು ಬಯಸುವವರು ಹೋಗಬಹುದು. ನಮ್ಮ ಪಕ್ಷ ಹಿಂದೂ ವಿರೋಧಿಯಲ್ಲ. ರಾಜಕೀಯ ಲಾಭಕ್ಕಾಗಿ ಬಿಜೆಪಿ ರಾಮಮಂದಿರ ಬಳಸಿಕೊಳ್ಳುತ್ತಿರುವುದಕ್ಕಷ್ಟೇ ನಮ್ಮ ವಿರೋಧ ಎಂದಿದ್ದಾರೆ.