ನವದೆಹಲಿ: ಉತ್ತರಾಖಂಡದ ಶಾಸಕ ರಾಜೇಂದ್ರ ಸಿಂಗ್ ಭಂಡಾರಿ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಲೋಕಸಭೆ ಚುನಾವಣೆಗೂ ಮುನ್ನಾ ದೊಡ್ಡ ಹಿನ್ನಡೆಯಾಗಿದೆ.
ನವದೆಹಲಿಯಲ್ಲಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮತ್ತು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಮೂರು ಬಾರಿ ಕಾಂಗ್ರೆಸ್ ಶಾಸಕರಾಗಿದ್ದ ಭಂಡಾರಿ, ಈ ಹಿಂದೆ ರಾಜ್ಯದಲ್ಲಿ ಸಚಿವರೂ ಆಗಿದ್ದು, ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳಲ್ಲಿ ಬಿಜೆಪಿ ಸೇರಿದ್ದರು.
ಆಡಳಿತ ಪಕ್ಷಕ್ಕೆ ಸೇರಿದ ನಂತರ ಭಂಡಾರಿ ಅವರು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಶ್ಲಾಘಿಸಿದರು ಮತ್ತು ಬಿಜೆಪಿಯ ನೀತಿಗಳಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ ಎಂದು ಹೇಳಿದರು.
"ನಾನು ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ನನ್ನ ನಂಬಿಕೆಯನ್ನು ವ್ಯಕ್ತಪಡಿಸಿದ್ದೇನೆ, ಅವರು ರಾಷ್ಟ್ರವನ್ನು ಮುನ್ನಡೆಸಲು ಕೆಲಸ ಮಾಡುತ್ತಿರುವ ರೀತಿ ನನಗೆ ಸ್ಫೂರ್ತಿ ನೀಡಿದೆ... ನನಗೆ ಬಿಜೆಪಿಯ ನೀತಿಗಳಲ್ಲಿ ಸಂಪೂರ್ಣ ನಂಬಿಕೆಯಿದೆ" ಎಂದು ಅವರು ಹೇಳಿದರು.
ಭಂಡಾರಿ ಅವರನ್ನು ಬಿಜೆಪಿಗೆ ಸ್ವಾಗತಿಸಿದ ಕೇಂದ್ರ ಸಚಿವ ಪಿಯೂಷ್ ಗೋಯಲ್, ಮಾಜಿ ಕಾಂಗ್ರೆಸ್ ನಾಯಕ ಪ್ರಧಾನಿ ಮೋದಿಯವರ ಕೆಲಸದಿಂದ ಸ್ಫೂರ್ತಿ ಪಡೆದಿದ್ದಾರೆ ಎಂದು ಹೇಳಿದರು.