ದೇಶದ ನ್ಯಾಯಾಂಗದಲ್ಲಿ ಉಂಟಾಗಿರುವ ಬಿರುಕು ಸರಿಪಡಿಸಲು ರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿ ಮಧ್ಯ ಪ್ರವೇಶಿಸಬೇಕು ಎಂದು ಕಾಂಗ್ರೆಸ್ ಸಂಸದ ಎಸ್.ಪಿ.ಮುದ್ದಹನುಮೇಗೌಡ ಒತ್ತಾಯಿಸಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಅವರು, ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಮೂರ್ತಿ ವಿರುದ್ಧ ನಾಲ್ವರು ನ್ಯಾಯಾಧೀಶರು ಆಕ್ರೋಶ ವ್ಯಕ್ತಪಡಿಸಿರುವ ಘಟನೆಯನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ.
ನ್ಯಾಯಾಂಗ ವ್ಯವಸ್ಥೆಯಲ್ಲಿ ಈ ಘಟನೆಯಿಂದ ದೇಶದ ಜನರ ಭಾವನೆಗೆ ಧಕ್ಕೆಯಾಗಿದೆ. ಈ ಬೆಳವಣಿಗೆ ಮಾರಕವಾದ ಬೆಳವಣಿಗೆಯಾಗಿದೆ. ನ್ಯಾಯಾಂಗ ತೊಂದರೆಯಲ್ಲಿದ್ದಾಗ ಕಾರ್ಯಾಂಗ ಮತ್ತು ಶಾಸಕಾಂಗ ಮಧ್ಯಪ್ರವೇಶಿಸುವ ಅವಶ್ಯಕತೆ ಇದೆ ಎಂದಿದ್ದಾರೆ.
ರಾಷ್ಟ್ರಪತಿ ರಾಮಾನಾಥ್ ಕೋವಿಂದ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಧ್ಯೆ ಪ್ರವೇಶ ಮಾಡಿ ಸಮಸ್ಯೆ ಬಗೆಹರಿಸಬೇಕು ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.