Publish Date: Thu, 30 Mar 2023 (07:41 IST)
Updated Date: Wed, 29 Mar 2023 (23:45 IST)
ನವದೆಹಲಿ : ಕರ್ನಾಟಕ ವಿಧಾನಸಭಾ ಚುನಾವಣಾ ವೇಳಾಪಟ್ಟಿ ಪ್ರಕಟವಾದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಬಲಿಷ್ಠವಾಗಿದ್ದು, ಪಕ್ಷದ ಬಲ ಹೆಚ್ಚಿಸಿಕೊಳ್ಳಲು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರ ಸೇರಿದಂತೆ ಪಕ್ಷದ ಹಿರಿಯ ನಾಯಕರು ರಾಜ್ಯದಲ್ಲಿ ಪ್ರಚಾರ ನಡೆಸಲಿದ್ದಾರೆ. ಅಲ್ಲದೇ ಗೆಲ್ಲುವ ಅಭ್ಯರ್ಥಿಗಳ ಅಭಿಪ್ರಾಯ ಪಡೆದು ಮುಖ್ಯಮಂತ್ರಿ ಹುದ್ದೆಯನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದರು.
ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ಎತ್ತಿಹಿಡಿಯಲು ಕಾಂಗ್ರೆಸ್ ಶತಪ್ರಯತ್ನ ಮಾಡುತ್ತಿದೆ. ನಮ್ಮ ಕಾರ್ಯಕರ್ತರು ಎಲ್ಲಾ ಬೂತ್ಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಚುನಾವಣೆಯಲ್ಲಿ ಗೆಲ್ಲುವ ಎಲ್ಲಾ ಸಾಧ್ಯತೆಗಳಿವೆ. ಈ ಕಾರಣಕ್ಕಾಗಿಯೇ ಪ್ರಧಾನಿ ಹಾಗೂ ಗೃಹಸಚಿವರು ಪದೇ ಪದೇ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ ಎಂದರು.