Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಜಲ್ಲಿಕಟ್ಟು ಕ್ರೀಡೆಗೆ ಕೊರೊನಾ ಮಾರ್ಗಸೂಚಿ ಜಾರಿ!

ಜಲ್ಲಿಕಟ್ಟು ಕ್ರೀಡೆಗೆ ಕೊರೊನಾ ಮಾರ್ಗಸೂಚಿ ಜಾರಿ!
ಚೆನ್ನೈ , ಸೋಮವಾರ, 10 ಜನವರಿ 2022 (16:20 IST)
ಚೆನ್ನೈ : ತಮಿಳುನಾಡಿನಲ್ಲಿ ಪೊಂಗಲ್ ಹಬ್ಬದ ವೇಳೆ ನಡೆಯುವ ಜಲ್ಲಿಕಟ್ಟು ಕ್ರೀಡಾಕೂಟಕ್ಕೆ ಸರ್ಕಾರ ಅನುಮತಿ ನೀಡಿದ್ದು,

ಕೊರೊನಾ ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ ಮತ್ತು ಸ್ಪರ್ಧೆಯಲ್ಲಿ ಭಾಗವಹಿಸಲು 300 ಜನರಿಗೆ ಅವಕಾಶ ನೀಡಿದ್ದು, ಎಲ್ಲರಿಗೂ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಿದೆ.

ತಮಿಳುನಾಡಿನ ಜನತೆಗೆ ಬಹು ದೊಡ್ಡ ಹಬ್ಬ ಅಂದರೆ ಪೊಂಗಲ್. ವರ್ಷದ ಆರಂಭದಲ್ಲಿ ಬರುವ ಪೊಂಗಲ್ ಹಬ್ಬದ ವೇಳೆ ತಮಿಳುನಾಡಿನಲ್ಲಿ ಜಲ್ಲಿಕಟ್ಟು ಕ್ರೀಡೆಯನ್ನು ಏರ್ಪಟಡಿಸಲಾಗುತ್ತದೆ. ಆದರೆ ಕಳೆದ ಎರಡು ವರ್ಷಗಳಿಂದ ಕೊರೊನಾ ಕಾರಣ ಜಲ್ಲಿಕಟ್ಟು ಕ್ರೀಡೆಯನ್ನು ನಿಲ್ಲಿಸಲಾಗಿತ್ತು.

ಆದರೆ ಈ ಬಾರಿ ರಾಜ್ಯದಲ್ಲಿ ಮತ್ತೆ ಜಲ್ಲಿಕಟ್ಟು ಕ್ರೀಡಾಕೂಟವನ್ನು ಆಯೋಜಿಸಿರುವ ಸರ್ಕಾರ ಕೊರೊನಾ ನಿಯಮಗಳನ್ನು ಜಾರಿಗೊಳಿಸಿದ್ದು, ಗೂಳಿ ಪಳಗಿಸುವವರು ಸೇರಿ 300 ಜನ ಮಾತ್ರ ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳಬಹುದೆಂದು ಸೂಚಿಸಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಸಂಜೆ 7ರ ನಂತರ ಬೀಚ್‍ಗೆ ನಿರ್ಬಂಧ!