Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಕೊರೊನಾ ಸೋಂಕಿನ ಪ್ರಮಾಣದಲ್ಲಿ ತುಸು ಇಳಿಕೆ

ಕೊರೊನಾ ಸೋಂಕಿನ ಪ್ರಮಾಣದಲ್ಲಿ ತುಸು ಇಳಿಕೆ
ದೆಹಲಿ , ಭಾನುವಾರ, 30 ಮೇ 2021 (11:42 IST)
ದೆಹಲಿ: ಕೊರೊನಾ ಎರಡನೇ ಅಲೆಗೆ ದೇಶದ ಜನ ಈಗಾಗಲೇ ಸಾಕಷ್ಟು ತತ್ತರಿಸಿ ಹೋಗಿದ್ದಾರೆ. ಸಾಕಷ್ಟು ಜನ ಈ ಮಹಾಮಾರಿಗೆ ಬಲಿಯಾಗಿದ್ದಾರೆ. ಈಗ ತುಸು ಸಮಾಧಾನದ ಸುದ್ದಿಯೆಂದರೆ ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣದಲ್ಲಿ ತುಸು ಇಳಿಕೆ ಕಂಡುಬಂದಿದೆ.

ಕಳೆದ 24 ಗಂಟೆಯಲ್ಲಿ 1,65,553 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು 3460 ಜನ ಸಾವನ್ನಪ್ಪಿದ್ದಾರೆ. ಇನ್ನು ಕಳೆದ 24 ಗಂಟೆಯಲ್ಲಿ 2,76,309 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಸಕ್ರಿಯ ಪ್ರಕರಣಗಳು 21,14,508 ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಮೂರೇ ವಾರಗಳಲ್ಲಿ ಕೊರೊನಾ ಸೋಂಕು ಶೇ 50 ರಷ್ಟು ಇಳಿಮುಖ ಕಂಡಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ದಿನದಲ್ಲಿ 3 ಲಕ್ಷದವರೆಗೆ ದಾಖಲಾಗುತ್ತಿದ್ದ ಸೋಂಕಿತರ ಸಂಖ್ಯೆ ಇದೀಗ 1 ಲಕ್ಷಕ್ಕೆ ಇಳಿದಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ


Share this Story:

Follow Webdunia kannada

ಮುಂದಿನ ಸುದ್ದಿ

ಅಮೆಥಿಯಲ್ಲಿ ಹೋಂ ಐಸೋಲೇಷನ್ ನಲ್ಲಿರುವ ಕೊರೊನಾ ಸೋಂಕಿತರಿಗೆ ಮೆಡಿಕಲ್ ಕಿಟ್ ಕಳುಹಿಸಿದ ರಾಹುಲ್ ಗಾಂಧಿ