ಡೆಡ್ಲಿ ಕೊರೊನಾ ವೈರಸ್ ಅಟ್ಟಹಾಸ ಜಾಗತಿಕವಾಗಿ ಮುಂದುವರಿದಿದೆ.
ಈ ನಡುವೆ ಭಾರತದಲ್ಲಿ ಕೊರೊನಾ ವೈರಸ್ ಗೆ ಲಸಿಕೆ ಬರೋ ಸಾಧ್ಯತೆಯನ್ನು ಕೇಂದ್ರ ಸರಕಾರ ಹೇಳಿದೆ.
2020 ರ ವರ್ಷದ ಅಂತ್ಯದ ಒಳಗಾಗಿ ದೇಶದಲ್ಲಿ ಕೊರೊನಾ ವೈರಸ್ ಗೆ ಮೊದಲ ಲಸಿಕೆ ಬರಲಿದೆ ಎಂದು ಕೇಂದ್ರ ಸಚಿವ ಡಾ.ಹರ್ಷ ವರ್ಧನ್ ತಿಳಿಸಿದ್ದಾರೆ.
ದೇಶದಲ್ಲಿ ಮೂರನೇ ಹಂತದಲ್ಲಿ ಲಸಿಕೆಯ ಕ್ಲಿನಿಕಲ್ ಟ್ರಯಲ್ ನಡೆಯುತ್ತಿದೆ ಎಂದಿದ್ದಾರೆ.