Publish Date: Fri, 19 Feb 2021 (09:24 IST)
Updated Date: Fri, 19 Feb 2021 (09:25 IST)
ಪುದುಕೋಟೈ : ಮಾನಸಿಕ ಅಸ್ವಸ್ಥ ಹುಡುಗನಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಮಾಡಿದ 34 ವರ್ಷದ ವ್ಯಕ್ತಿಗೆ ಮರಣದಂಡನೆ ವಿಧಿಸಲಾಗಿದೆ.
ಕೂಲಿ ಕಾರ್ಮಿಕನಾಗಿದ್ದ ಆರೋಪಿ ಹುಡುಗನನ್ನು ಕರೆದೊಯ್ದು ಲೈಂಗಿಕ ಕಿರುಕುಳ ನೀಡಿ ಖಾಸಗಿ ಭಾಗವನ್ನು ಗಾಯಗೊಳಿಸಿದ್ದಾನೆ. ಇದರಿಂದ ಗಂಭೀರ ಸ್ಥಿತಿಗೆ ತಲುಪಿದ ಹುಡುಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಕೋರ್ಟ್ ಗೆ ಒಪ್ಪಿಸಿದ್ದಾರೆ. ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಆರೋಪಿಗೆ 30ಸಾವಿರ ರೂ ದಂಡ ಮತ್ತು ಮರಣದಂಡನೆ ಶಿಕ್ಷೆ ವಿಧಿಸಿದೆ.