Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ ವೃದ್ಧನಿಗೆ ತಕ್ಕ ಶಾಸ್ತಿ ಮಾಡಿದ ಕೋರ್ಟ್

ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ ವೃದ್ಧನಿಗೆ ತಕ್ಕ ಶಾಸ್ತಿ ಮಾಡಿದ ಕೋರ್ಟ್
ಚೆನ್ನೈ , ಗುರುವಾರ, 29 ಸೆಪ್ಟಂಬರ್ 2022 (08:40 IST)
ಚೆನ್ನೈ: 6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ 73 ವರ್ಷದ ವೃದ್ಧನಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಲಾಗಿದೆ.

ತನ್ನ ಅಂಗಡಿಗೆ ಚಾಕಲೇಟ್ ಕೊಳ್ಳಲು ಬಂದ 6 ವರ್ಷದ ಬಾಲಕಿಗೆ ಮತ್ತಷ್ಟು ಚಾಕಲೇಟ್ ಕೊಡುವುದಾಗಿ ಅಮಿಷ ತೋರಿಸಿ ಅಂಗಡಿ ಹಿಂದಿನ ಕೊಠಡಿಗೆ ಕರೆದೊಯ್ದು ವೃದ್ಧ ಅತ್ಯಾಚಾರವೆಸಗಿದ್ದ. ಬಳಿಕ ಇದನ್ನು ಯಾರಿಗೂ ಹೇಳದಂತೆ ಎಚ್ಚರಿಕೆ ನೀಡಿದ್ದ.

ಆದರೆ ಬಾಲಕಿ ಈ ವಿಚಾರವನ್ನು ತನ್ನ ತಾಯಿಗೆ ಹೇಳಿದ್ದಳು. ಅದರಂತೆ ತಾಯಿ ಪೊಲೀಸರಿಗೆ ದೂರು ನೀಡಿದ್ದಾಳೆ. ಪೊಲೀಸರು ಆರೋಪಿಯನ್ನು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಇದೀಗ ಸಂತ್ರಸ್ತ ಬಾಲಕಿಗೆ ಸರ್ಕಾರ 10 ಲಕ್ಷ ರೂ. ಪರಿಹಾರ ಮತ್ತು ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಉತ್ತರಾಖಂಡದ ಜೈಲಿನಿಂದ ವಿಶಿಷ್ಟ ರೀತಿಯ ಆಫರ್!