Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಚೆನ್ನೈ: ಹೆತ್ತ ತಾಯಿಯನ್ನೇ ಮಗಳು ತನ್ನ ಸ್ನೇಹಿತರ ಜೊತೆ ಸೇರಿಕೊಂಡು ಕೊಲೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
17 ವರ್ಷದ ಅಪ್ರಾಪ್ತ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈಕೆಯ ಹೆತ್ತವರು ವಿಚ್ಛೇದನ ಪಡೆದು ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಆದರೆ ಮಧ್ಯರಾತ್ರಿ ವೇಳೆಗೆ ತಾಯಿಯನ್ನು ಕೊಲೆ ಮಾಡಿ ಪೊಲೀಸರಿಗೆ ಕರೆ ಮಾಡಿ ಯಾರೋ ತನ್ನ ತಾಯಿಯನ್ನು ಕೊಲೆ ಮಾಡಿರುವುದಾಗಿ ನಾಟಕವಾಡಿದ್ದಳು.
ಆದರೆ ತನಿಖೆ ನಡೆಸಿದ ಪೊಲೀಸರಿಗೆ ಮಗಳೇ ಕೊಲೆ ಮಾಡಿರುವುದು ಗೊತ್ತಾಗಿತ್ತು. ವಿಚಾರಿಸಿದಾಗ ತಾಯಿ ವೇಶ್ಯಾವಾಟಿಕೆಯಲ್ಲಿ ತೊಡಗಿಸಲು ಒತ್ತಾಯಿಸುತ್ತಿದ್ದರು. ಅದಕ್ಕೇ ಕೊಲೆ ಮಾಡಿರುವುದಾಗಿ ಎಂಬ ಆಘಾತಕಾರಿ ವಿಚಾರವನ್ನು ಬಹಿರಂಗಪಡಿಸಿದ್ದಾಳೆ.