Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ವಯನಾಡು ಭೂಕುಸಿತದಲ್ಲಿ ಮೃತರ ಸಂಖ್ಯೆ 49ಕ್ಕೆ ಏರಿಕೆ: ಹಲವು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ

 Wayanad Landslide

Sampriya

ತಿರುವನಂತಪುರ , ಮಂಗಳವಾರ, 30 ಜುಲೈ 2024 (14:23 IST)
ತಿರುವನಂತಪುರ: ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡುವಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಈವರೆಗೆ 49 ಮಂದಿ ಮೃತಪಟ್ಟಿದ್ದು, ಇನ್ನೂ ಹಲವು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

ಈ ಮಧ್ಯೆ ವಯನಾಡು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ಮಲಪ್ಪುರಂ, ಕೋಯಿಕ್ಕೋಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಇಂದು ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ತಿರುವನಂತಪುರ ಮತ್ತು ಕೊಲ್ಲಂ ಹೊರತುಪಡಿಸಿ ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್ ಮತ್ತು ಕಾಸರಗೋಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆಗೆ ವಾಯುಪಡೆಯ ಎರಡು ಹೆಲಿಕಾಪ್ಟರ್‌ಗಳನ್ನು ಬಳಸಲಾಗಿದೆ. ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ಸೇರಿದಂತೆ ಜಿಲ್ಲಾಡಳಿತವೂ ಸ್ಥಳದಲ್ಲಿ ಬೀಡು ಬಿಟ್ಟಿದೆ.

ಭೂ ಕುಸಿತ ದುರಂತಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರು ಕೇರಳ ಸಿಎಂ ಪಿಣರಾಯಿ ವಿಜಯನ್ ಜೊತೆ ಮಾತನಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೇರಳದ ವಯನಾಡಿನಲ್ಲಿ ಗುಡ್ಡ ಕುಸಿತ ಹೇಗಾಯ್ತು? ಇಲ್ಲಿದೆ ವಿಡಿಯೋ